ಭಾರತದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ
ನವದೆಹಲಿ: ಜಗ ಮೆಚ್ಚಿದ ನಾಯಕ, ಭಾರತದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರು 93ನೇ ಹುಬ್ಬಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಭಾಶಯಗಳನ್ನು ಕೋರಿದ್ದಾರೆ.
93ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಹಿರಿಯ ರಾಜಕಾರಣಿ ವಾಜಪೇಯಿಯವರಿಗೆ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ ಸೇರಿದಂದೆ ವಿವಿಧ ರಾಜಕೀಯ ಪಕ್ಷದ ಮುಖಂಡರು ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಶುಭಾ ಹಾರೈಸಿದ್ದಾರೆ.
ನಮ್ಮ ಪ್ರೀತಿಯ ಹಾಗೂ ಗೌರವಾನ್ವಿಯ ಮಾದಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟ್ವಿಟ್ಟರ್ ನಲ್ಲಿ ಶುಭ ಹಾರೈಸಿದ್ದಾರೆ.
ನಮ್ಮ ಪ್ರೀತಿಯ ಅಟಲ್ ಜೀ ಯವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅಟಲ್ ಜೀ ಅವರ ಉತ್ತಮ ಆರೋಗ್ಯ ಮತ್ತು ದೀರ್ಘಾಯಸ್ಸಿಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿರುವ ಮೋದಿಯವರು, ವಾಜಪೇಯಿಯವರ ನಾಯಕತ್ವ ಮತ್ತು ಸೇವೆಯ ಗುಣಗಾನ ಮಾಡಿದ್ದಾರೆ.
ಇದರಂತೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರೂ ಕೂಡ ಶುಭ ಹಾರೈಸಿದ್ದು, ಶ್ರೀ ಅಟಲ್ ಬಿಹಾರಿ ವಾಜಪೇಯಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು. ವಾಯಪೇಯಿ ಅತ್ಯಂತ ಸ್ಫೂರ್ತಿದಾಯಕ ಮತ್ತು ಮೆಚ್ಚುಗೆಯ ನಾಯಕರಾಗಿದ್ದು, ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics