ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ 
ದೇಶ

ಖಾಸಗಿಯಾಗಿ ಜಾಧವ್-ಕುಟುಂಬ ಸದಸ್ಯರ ಭೇಟಿಯಾಗಲು ಬಿಡಬೇಕಿತ್ತು: ಸುಬ್ರಮಣಿಯನ್ ಸ್ವಾಮಿ

ಭಾರತೀಯ ಪ್ರಜೆ ಕುಲ್'ಭೂಷಣ್ ಜಾಧವ್ ಹಾಗೂ ಅವರ ಕುಟುಂಬ ಸದಸ್ಯರ ಭೇಟಿ ಖಾಸಗಿಯಾಗಿರಬೇಕಿತ್ತು ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಸೋಮವಾರ ಹೇಳಿದ್ದಾರೆ...

ನವದೆಹಲಿ: ಭಾರತೀಯ ಪ್ರಜೆ ಕುಲ್'ಭೂಷಣ್ ಜಾಧವ್ ಹಾಗೂ ಅವರ ಕುಟುಂಬ ಸದಸ್ಯರ ಭೇಟಿ ಖಾಸಗಿಯಾಗಿರಬೇಕಿತ್ತು ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಸೋಮವಾರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಪಾಕಿಸ್ತಾನ ವಿದೇಶಾಂಗ ಸಚಿವಾಲಯ, ಪಾಕಿಸ್ತಾನ ವಿದೇಶಾಂಗ ಕಚೇರಿಯಲ್ಲಿ  ಕ್ಯಾಮೆರಾಗಳ ಕಣ್ಗಾವಲಿದ್ದು, ಜಾಧವ್ ಹಾಗೂ ಅವರ ಕುಟುಂಬ ಸದಸ್ಯರ ಭೇಟಿಯನ್ನು ಪಾಕಿಸ್ತಾನ ವಿದೇಶಾಂಗ ಕಚೇರಿಯಲ್ಲೇಕೆ ನಡೆಸಲಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ. 
ಜಾಧವ್ ಹಾಗೂ ಅವರ ಕುಟುಂಬ ಸದಸ್ಯರ ಭೇಟಿ ಖಾಸಗಿಯಾಗಿರಬೇಕಿತ್ತು. ಆದರೆ, ವಿದೇಶಾಂಗ ಕಚೇರಿಯಲ್ಲಿ ಭೇಟಿಗೆ ಅವಕಾಶವನ್ನು ಕಲ್ಪಿಸಲಾಗಿದೆ. ಇದೆಂತಹ ಭೇಟಿ? ಜಾಧವ್ ಪತ್ನಿ ತನ್ನ ಪತಿ ಹೇಗಿದ್ದಾರೆಂಬುದನ್ನು ತಿಳಿಯಲು ಹಾಗೂ ಅವರನ್ನು ನೋಡುವ ಸಲುವಾಗಿ ಪಾಕಿಸ್ತಾನಕ್ಕೆ ಹೋಗಿದ್ದಾರೆ. ಜನರು ನೋಡುತ್ತಿದ್ದಾಗ ಪತಿ ಹಾಗೂ ಪತ್ನಿ ಮಾತನಾಡಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ. 
ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ಪ್ರಜೆ ಜಾಧವ್ ಅವರನ್ನು ಭೇಟಿಯಾಗಲು ಅವರ ಪತ್ನಿ ಹಾಗೂ ತಾಯಿ ಈಗಾಗಲೇ ಪಾಕಿಸ್ತಾನ ತಲುಪಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT