ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದ ಪ್ರಧಾನಿ ಮೋದಿ 
ದೇಶ

ದೆಹಲಿ ಮೆಟ್ರೋ ಮೆಜೆಂತಾ ಲೈನ್ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ

ದೆಹಲಿಯಲ್ಲಿ ಮೆಟ್ರೋದ ಮುಂದುವರೆದ ಭಾಗವಾಗಿರುವ ಮೆಜೆಂತಾ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಚಾಲನೆ ನೀಡಿ ಮೆಟ್ರೋ ರೈಲಿನಲ್ಲಿ ಮೊದಲ ಸಂಚಾರ ಕೂಡ ಮಾಡಿದರು.

ನವದೆಹಲಿ: ದೆಹಲಿಯಲ್ಲಿ ಮೆಟ್ರೋದ ಮುಂದುವರೆದ ಭಾಗವಾಗಿರುವ ಮೆಜೆಂತಾ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಚಾಲನೆ ನೀಡಿ ಮೆಟ್ರೋ ರೈಲಿನಲ್ಲಿ ಮೊದಲ ಸಂಚಾರ ಕೂಡ ಮಾಡಿದರು.
ಪ್ರಮುಖ ವಿಚಾರವೆಂದರೆ ಈ ಬಹು ನಿರೀಕ್ಷಿತ ಈ ಕಾರ್ಯಕ್ರಮಕ್ಕೆ ದೆಹಲಿ ಮೆಟ್ರೋ ಅಧಿಕಾರಿಗಳು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಆಹ್ವಾನವನ್ನೇ ನೀಡಿರಲಿಲ್ಲ. ಹೀಗಾಗಿ ಸಿಎಂ ಕೇಜ್ರಿವಾಲ್ ಕಾರ್ಯಕ್ರಮಕ್ಕೆ  ಗೈರಾಗಿದ್ದರು. ಈ ಕಾರ್ಯಕ್ರಮಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಆಹ್ವಾನ ನೀಡಲಾಗಿರಲಿಲ್ಲ. ಇದೇ ಕಾರಣಕ್ಕೆ ಕೇಜ್ರಿವಾಲ್ ಕಾರ್ಯಕ್ರಮಕ್ಕೆ ಗೈರಾಗಿದ್ದರು ಎನ್ನಲಾಗಿದೆ. 
ಈ ಹಿಂದೆ ಉದ್ಘಾಟನಾ ಕಾರ್ಯಕ್ರಮಕ್ಕೆ ಕೇಜ್ರಿವಾಲ್ ಅವರಿಗೆ ಆಹ್ವಾನ ಕುರಿತು ಯಾವುದೇ ರೀತಿಯ ಆಹ್ವಾನವನ್ನು ಕಾರ್ಯಾಲಯ ಸ್ವೀಕರಿಸಿಲ್ಲ ಎಂದು ದೆಹಲಿ ಸರ್ಕಾರದ ವಕ್ತಾರರು ಹೇಳಿದ್ದಾರೆ. ಕಾರ್ಯಕ್ರಮಕ್ಕೆ ನಮಗೆ  ಅಧಿಕೃತ ಆಹ್ವಾನ ಬಂದಿಲ್ಲ. ನಮ್ಮ ಉನ್ನತ ಆದ್ಯತೆಯು ಪ್ರಯಾಣಿಕರಿಗೆ ಕಡಿಮೆ ಬೆಲೆಯಲ್ಲಿ ಸುರಕ್ಷಿತ ಮೆಟ್ರೋ ಸೇವೆ ನೀಡುವುದೇ ಆಗಿದೆ. ಇಲ್ಲಿಯವರೆಗೂ ನಾವು ಯಾವುದೇ ಆಮಂತ್ರಣವನ್ನು ಸ್ವೀಕರಿಸಿಲ್ಲ ಎಂದು ಹೇಳಿದರು. 
ಇನ್ನು ಇಂದು ಉದ್ಘಾಟನೆಯಾದ ದೆಹಲಿ ಮೆಟ್ರೋ ರೈಲಿನ ಮೆಜೆಂತಾ ಮೆಟ್ರೋ ಲೈನ್ ಉದ್ಘಾಟನೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಮೆಟ್ರೋ ರೈಲಿನಲ್ಲಿ ಮೊದಲ ಪ್ರಯಾಣ ಮಾಡಿದರು. 
ದೆಹಲಿಯ ಜನಕಪುರಿಯಿಂದ ನೋಯ್ಡಾದವರೆಗೆ ಮೆಜೆಂತಾ ಮೆಟ್ರೋ ಲೈನ್ ನಿರ್ಮಿಸಲಾಗಿದ್ದು, ಈ ಹೊಸ ಮಾರ್ಗ ದೆಹಲಿ ನೋಯ್ಡಾ ಮತ್ತು ದಕ್ಷಿಣ ದೆಹಲಿಯ ಪ್ರಯಾಣದ ವೇಳೆ ಕಡಿಮೆಯಾಗಲಿದ್ದು ದೆಹಲಿಯ ಹೊರಗೆ ಮೊದಲ  ಇಂಟರ್ ಚೇಂಜ್ ಆಗಿ ಬಟಾನಿಕಲ್ ಗಾರ್ಡನ್ ಸ್ಪೇಷನ್ ಅನ್ನು ಅಭಿವೃದ್ಧಿಪಡಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!

ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಭದ್ರಕೋಟೆ ಮುರಿಯಲು BJP-JDS ರಣತಂತ್ರ; HDK ನೇತೃತ್ವದಲ್ಲಿ ಮಹತ್ವದ ಸಭೆ..!

ಮಲೆನಾಡು, ಕರಾವಳಿ ರೈಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರ ಆದ್ಯತೆ: ಕೇಂದ್ರ ಸಚಿವ ವಿ. ಸೋಮಣ್ಣ