ಕುಲಭೂಷಣ್ ಜಾಧವ್ 
ದೇಶ

ಬಿಂದಿ, ತಾಳಿ ಬಿಚ್ಚಿಸಿದರು; ಜಾಧವ್ ತಾಯಿಗೆ ಮಾತೃ ಭಾಷೆಯಲ್ಲಿ ಮಾತನಾಡಲು ಅನುಮತಿ ನಿರಾಕರಿಸಿದರು!

ಕುಲಭೂಷಣ್ ಜಾಧವ್ ಗೆ ತಾಯಿಯೊಂದಿಗೆ ಮಾತೃ ಭಾಷೆಯಲ್ಲಿ ಮಾತನಾಡಲು ಪಾಕ್ ಅಧಿಕಾರಿಗಳು ಅನುಮತಿ ನಿರಾಕರಣೆ ಮಾಡಿದ್ದರು ಎಂದು ತಿಳಿಸಿದೆ.

ನವದೆಹಲಿ: ಪಾಕಿಸ್ತಾನದಲ್ಲಿ ಬಂಧನಕ್ಕೊಳಗಾಗಿರುವ ಭಾರತೀಯ ನೌಕಾ ಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರನ್ನು ಕುಟುಂಬ ಸದಸ್ಯರು ಭೇಟಿ ಮಾಡಿರುವುದರ ಬಗ್ಗೆ ವಿದೇಶಾಂಗ ಸಚಿವಾಲಯ ಕೆಲವು ಮಾಹಿತಿಗಳನ್ನು ಬಹಿರಂಗಪಡಿಸಿದ್ದು, ಕುಲಭೂಷಣ್ ಜಾಧವ್ ಗೆ ತಾಯಿಯೊಂದಿಗೆ ಮಾತೃ ಭಾಷೆಯಲ್ಲಿ ಮಾತನಾಡಲು ಪಾಕ್ ಅಧಿಕಾರಿಗಳು ಅನುಮತಿ ನಿರಾಕರಣೆ ಮಾಡಿದ್ದರು ಎಂದು ತಿಳಿಸಿದೆ. 
ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ಪಾಕಿಸ್ತಾನದ ಅಧಿಕಾರಿಗಳು ಭೇಟಿಯ ನಿಯಮಗಳನ್ನು ಉಲ್ಲಂಘನೆ ಮಾಡಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ಜಾಧವ್ ಅವರಿದ್ದ ರೀತಿ ಅವರ ಆರೋಗ್ಯ ಸುಸ್ಥಿತಿಯಲ್ಲಿರುವುದರ ಬಗ್ಗೆ ಅನುಮಾನ ಮೂಡಿಸುತ್ತವೆ. ಕುಟುಂಬ ಸದಸ್ಯರೊಂದಿಗಿನ ಮಾತುಕತೆ ವೇಳೆಯಲ್ಲಿಯೂ ಅವರ ಮಾತುಗಳು ತರಬೇತುಗೊಳಿಸಿದಂತೆಯೇ ಇತ್ತು. ಹೆದರಿಕೆ ಮತ್ತು ಒತ್ತಡದಲ್ಲಿಯೇ ಜಾಧವ್ ಮಾತನಾಡಿದ್ದು ಸ್ಪಷ್ಟವಾಗಿತ್ತು ಎಂದು ಹೇಳಿದ್ದಾರೆ. 
ಭೇಟಿಗೂ ಮುನ್ನ ಜಾಧವ್ ಪತ್ನಿ ಅವರ ಬಿಂದಿ, ಮಂಗಳಸೂತ್ರ, ಚಪ್ಪಲಿಗಳನ್ನು ತೆಗೆಸಿದ್ದರು. ವಾಪಸ್ ಹೊರಡುವ ವೇಳೆ ಜಾಧವ್ ಪತ್ನಿ ಪಾದರಕ್ಷೆಗಳನ್ನು ವಾಪಸ್ ನೀಡುವಂತೆ ಕೇಳಿದರೂ ಕೊಡಲಿಲ್ಲ. ಅಷ್ಟೇ ಅಲ್ಲ, ಜಾಧವ್ ಅವರು ತಮ್ಮ ತಾಯಿಯೊಂದಿಗೆ ಮಾತೃ ಭಾಷೆಯಾದ ಮರಾಠಿಯಲ್ಲಿ ಮಾತನಾಡುವುದಕ್ಕೂ ಅವಕಾಶ ನೀಡಲಿಲ್ಲ ಎಂದು ವಿದೇಶಾಂಗ ಇಲಾಖೆ ಹೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!