ಜಮ್ಮು ಮತ್ತು ಕಾಶ್ಮೀರದ ಪೊಲೀಸರು
ಶ್ರೀನಗರ: ಪುಲ್ವಾಮದಲ್ಲಿ ಭದ್ರತಾ ಪಡೆಗಳು ನಡೆಸಿದ್ದ ಎನ್'ಕೌಂಟರ್'ನಿಂದಾಗಿ ಪಾಕಿಸ್ತಾನ ಮೂಲಕ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಭಾರೀ ಹಿನ್ನಡೆಯುಂಟಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಮಂಗಳವಾರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಐಜಿಪಿ ಮುನೀರ್ ಖಾನ್ ಅವರು, ಪುಲ್ವಾಮ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ್ದ ಕಾರ್ಯಾಚರಣೆಯಲ್ಲಿ ಉಗ್ರ ನೂರ್ ಮೊಹಮ್ಮದ ತಾಂತ್ರೆನನ್ನು ಹತ್ಯೆ ಮಾಡಲಾಗಿದ್ದು, ಈ ಬೆಳವಣಿಗೆ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಭಾರೀ ಹಿನ್ನಡೆಯುಂಟಾಗಿದೆ ಎಂದು ಹೇಳಿದ್ದಾರೆ.
ಕಾರ್ಯಾಚರಣೆ ನಡೆದ ಸ್ಥಳದಲ್ಲಿ ಎಕೆ-56, ಕೆಲ ನಿಯತಕಾಲಿಕೆಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಗಾಯಗೊಂಡಿದ್ದಾರೆಂದು ತಿಳಿಸಿದ್ದಾರೆ.
ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಉಗ್ರರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಭದ್ರತಾ ವಾಹನಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲು ಸಂಚು ರೂಪಿಸುತ್ತಿದೆ ಎಂದು ಮಾಹಿತಿ ತಿಳಿದುಬಂದಿತ್ತು. ಈ ಮಾಹಿತಿ ಲಭ್ಯವಾದ ಬಳಿಕ ಸಂಬೂರಾ ಎಂಬ ಪ್ರದೇಶದಲ್ಲಿ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಮೋಸ್ಟ್ ವಾಂಟೆಡ್ ಉಗ್ರ ನೂರ್ ಮೊಹಮ್ಮದ್ ತಾಂತ್ರೆ ಅಡಗಿ ಕುಳಿತಿರುವುದಾಗಿ ಖಚಿತ ಮಾಹಿತಿ ಲಭ್ಯವಾಯಿತು. ಬಳಿಕ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಲು ಮುಂದಾಗಿತ್ತು.
ನೂರ್ ಮೊಹಮ್ಮದ್ ತಾಂತ್ರೆ ವಿರುದ್ಧ 2003ರಲ್ಲಿಯೇ ಪ್ರಕರಣ ದಾಖಲಾಗಿತ್ತು. ಬಳಿಕ ಪೆರೋಲ್ ಮೇಲೆ ಬಿಡುಗಡೆಗೊಂಡಿದ್ದ. ಇದಾದ ಬಳಿಕ ಮೋಸ್ಟ್ ವಾಂಟೆಡ್ ಉಗ್ರನಾಗಿ ಪರಿವರ್ತನೆಗೊಂಡಿದ್ದ. 2017ರ ವೇಳೆ ಭಯೋತ್ಪಾದನಾ ಚಟುವಟಿಕೆಗಳಲ್ಲಿ ಕೈಜೋಡಿಸಿದ್ದ. ಕಾರ್ಯಾಚರಣೆ ವೇಳೆ ನೂರ್ ಜೊತೆಗೆ ಮತ್ತೊಬ್ಬ ಉಗ್ರನೂ ಕೂಡ ಆದರೆ, ಆತ ಹೇಗೋ ತಪ್ಪಿಸಿಕೊಂಡಿದ್ದಾನೆ. ಇಂದು ನಡೆದ ಕಾರ್ಯಾಚರಣೆ ಜೆಇಎಂಗೆ ಭಾರೀ ಹಿನ್ನಡೆಯುಂಟಾಗುವಂತೆ ಮಾಡಿದೆ. ಭದ್ರತಾ ಪಡೆಗಳಿದು ಯಶಸ್ಸು ಎಂದೇ ಹೇಳಬಹುದು. ಕಾರ್ಯಾಚರಣೆ ವೇಳೆ ಗಾಯಗೊಂಡಿದ್ದ ಇಬ್ಬರು ಯೋಧರು ಇದೀಗ ಚೇತರಿಸಿಕೊಂಡಿದ್ದಾರೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics