ಮೀರತ್: ಮೀರತ್ ನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಸೋಮವಾರ ನಡೆದ ಹಳೆವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಷ್ಯನ್ ಬೆಲ್ಲಿ ನೃತ್ಯಗಾರ್ತಿಯರನ್ನು ಆಹ್ವಾನಿಸಿದ್ದಲ್ಲದೆ ಅಂಬ್ಯುಲೆನ್ಸ್ ವಾಹನದಲ್ಲಿ ಮದ್ಯದ ಪೆಟ್ಟಿಗೆಗಳನ್ನು ಸಂಗ್ರಹಿಸಿಟ್ಟಿರುವುದು ಕಂಡುಬಂದಿದೆ.
ಲಾಲಾ ಲಜಪತ್ ರಾಯ್ ವೈದ್ಯಕೀಯ ಕಾಲೇಜಿನಲ್ಲಿ ಈ ಕಾರ್ಯಕ್ರಮ ಆಯೋಜನೆಗೊಂಡಿದ್ದು ರೋಗಿಗಳು ಮಾತ್ರ ಪರದಾಡುತ್ತಿದ್ದದ್ದು ಕಂಡುಬಂದಿತು. ಮೀರತ್ ನ ಮುಖ್ಯ ವೈದ್ಯಕೀಯ ಅಧಿಕಾರಿ (ಸಿಎಂಒ) ರಾಜ್ ಕುಮಾರ್ ಘಟನೆಯನ್ನು ಖಂಡಿಸಿದ್ದಲ್ಲದೆ ಕಾರ್ಯಕ್ರಮಕ್ಕೆ ಅನುಮತಿ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
"ಕಾಲೇಜಿನಲ್ಲಿ ನಡೆದ ಕಾರ್ಯಕ್ರಮಕ್ಕೆ ರಷ್ಯಾದ ಬೆಲ್ಲಿ ನರ್ತಕರನ್ನು ಕರೆತರಲಾಗಿದೆ, ಆಂಬ್ಯುಲೆನ್ಸ್ ವ್ಯಾನ್ ನಲ್ಲಿ ಮದ್ಯವನ್ನು ಸಂಗ್ರಹಿಸಲಾಗಿದೆ ಎಂದು ಆರೋಪಗಳು ಕೇಳಿ ಬಂದಿದೆ. ಇದು ಖಂಡನಾರ್ಹ, ರಾಜ್ಯ ಸರ್ಕಾರ ನಡೆಸುವ ವೈದ್ಯಕೀಯ ಕಾಲೇಜಿನಲ್ಲಿ ಇಂತಹಾ ಘಟನೆ ನಡೆಯಬಾರದು. ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದು ಯಾರೆಂದು ತಿಳಿಯಲು ತನಿಖೆಗೆ ಆದೇಶಿಸಲಾಗಿದೆ" ರಾಜ್ ಕುಮಾರ್ ಎಎನ್ ಐ ಗೆ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics