ಪ್ರಮಾಣ ವಚನ ಸ್ವೀಕರಿಸಿದ ಜೈರಾಮ್ ಠಾಕೂರ್ 
ದೇಶ

ಹಿಮಾಚಲ ಪ್ರದೇಶ ನೂತನ ಸಿಎಂ ಆಗಿ ಜೈರಾಮ್ ಠಾಕೂರ್ ಪ್ರಮಾಣ ವಚನ ಸ್ವೀಕಾರ

ಹಿಮಾಚಲ ಪ್ರದೇಶ ನೂತನ ಮುಖ್ಮಮಂತ್ರಿಯಾಗಿ ಹಿರಿಯ ಬಿಜೆಪಿ ಮುಖಂಡ ಜೈರಾಮ್‌ ಠಾಕೂರ್‌ ಅವರು ಬುಧವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು.

ಶಿಮ್ಲಾ: ಹಿಮಾಚಲ ಪ್ರದೇಶ ನೂತನ ಮುಖ್ಮಮಂತ್ರಿಯಾಗಿ ಹಿರಿಯ ಬಿಜೆಪಿ ಮುಖಂಡ ಜೈರಾಮ್‌ ಠಾಕೂರ್‌ ಅವರು ಬುಧವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು.
ಶಿಮ್ಲಾದ ರಿಜ್‌ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಈ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಹಲವು ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಎಲ್ ಕೆ ಅಡ್ವಾಣಿ ಹಾಗೂ ಕೇಂದ್ರ ಸಚಿವರು, ಉನ್ನತ ಬಿಜೆಪಿ  ನಾಯಕರು ಮತ್ತು ಬಿಜೆಪಿ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು. ಇನ್ನು ನೂತನ ಸಿಎಂ ಜೈರಾಮ್ ಠಾಕೂರ್ ಅವರಿಗೆ ಹಿಮಾಚಲ ಪ್ರದೇಶ ರಾಜ್ಯಪಾಲ ಆಚಾರ್ಯ ದೇವವ್ರತ ಅವರು ಪ್ರತಿಜ್ಞಾ ವಿಧಿ  ಬೋಧಿಸಿದರು.
ಜೈರಾಮ್ ಠಾಕೂರ್ ಅವರೊಂದಿಗೆ ಬಿಜೆಪಿಯ ಕೆಲ ಶಾಸಕರೂ ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇನ್ನು ಇದೇ ಮೊದಲ ಬಾರಿ ಹಿಮಾಚಲ ಪ್ರದೇಶ ಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಭಾರತದ  ಪ್ರಧಾನಿಯೊಬ್ಬರು ಪಾಲ್ಗೊಂಡಿದ್ದಾರೆ.
ಇನ್ನು ನೂಚನ ಸಿಎಂ ಠಾಕೂರ್‌ ಅವರು ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್‌ ನ ಚೇತ್‌ ರಾಮ್‌ ಅವರನ್ನು ಸೋಲಿಸುವ ಮೂಲಕ ಸಿರಾಜ್‌ ಕ್ಷೇತ್ರವನ್ನು ಜಯಿಸಿದ್ದರು. 52ರ ಹರೆಯದ ಠಾಕೂರ್‌ ಅವರು ಈ ಹಿಂದೆ  ರಾಜ್ಯದಲ್ಲಿದ್ದ ಬಿಜೆಪಿ ಸಚಿವ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಹಾಯಕ ಸಚಿವರಾಗಿ ಸೇವೆ ಸಲ್ಲಿಸಿದ್ದರು. 
ಇನ್ನು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಪ್ರೇಮ್ ಕುಮಾರ್ ಧುಮಾಲ್ ಅವರು, ಚುನಾವಣೆಯಲ್ಲಿ ಸೋತ ಹಿನ್ನಲೆಯಲ್ಲಿ ಜೈರಾಮ್ ಠಾಕೂರ್ ಅವರಿಗೆ ಸಿಎಂ ಗಾದಿ ಒಲಿದು ಬಂದಿದೆ. ಹಿಮಾಚಲ  ಪ್ರದೇಶದ ಒಟ್ಟು 68 ಸ್ಥಾನಗಳ ಪೈಕಿ ಬಿಜೆಪಿ ಪಕ್ಷ ಒಟ್ಟು 44 ಕ್ಷೇತ್ರಗಳಲ್ಲಿ ಜಯಗಳಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT