ದೇಶ

ಅನಂತ್ ಕುಮಾರ್ ಹೆಗ್ಡೆ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಮೋದಿ ಸರ್ಕಾರ

Srinivas Rao BV
ನವದೆಹಲಿ: ಜಾತ್ಯಾತೀತರ ಬಗ್ಗೆ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ನೀಡಿದ್ದ ಹೇಳಿಕೆ ರಾಜ್ಯಸಭೆಯಲ್ಲಿ ಕೋಲಾಹಲ ಸೃಷ್ಟಿಸಿದ್ದು, ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂಬ ಹೇಳಿಕೆಗೆ ಆಕ್ಷೇಪ ವ್ಯಕ್ತವಾಗಿದ್ದು ಅನಂತ್ ಕುಮಾರ್ ಹೆಗ್ಡೆ ಅವರ ಹೇಳಿಕೆಯಿಂದ ಕೇಂದ್ರ ಸರ್ಕಾರ ಅಂತರ ಕಾಯ್ದುಕೊಂಡಿದೆ. 
ಜಾತ್ಯಾತೀತತೆ ಎಂಬ ಪದವನ್ನು ತೆಗೆದುಹಾಕಲು ಸಂವಿಧಾನಕ್ಕೆ ತಿದ್ದುಪಡಿ ತರುತ್ತೇವೆ ಎಂದು ಅನಂತ್ ಕುಮಾರ್ ಹೆಗ್ಡೆ ಹೇಳಿದ್ದರು. ಅನಂತ್ ಕುಮಾರ್ ಹೆಗ್ಡೆ ಹೇಳಿಕೆಗೆ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು ಕೋಲಾಹಲಕ್ಕೆ ಕಾರಣವಾಯಿತು. ಕಾಂಗ್ರೆಸ್ ಸದಸ್ಯರ ಆಕ್ಷೇಪಕ್ಕೆ ಪ್ರತಿಕ್ರಿಯೆ ನೀಡಿರುವ ಸಂಶದೀಯ ವ್ಯವಹಾರಗಳ ರಾಜ್ಯ ಸಚಿವ ವಿಜಯ್ ಗೋಯಲ್, ನಾವು ದೇಶದ ಸಂವಿಧಾನಕ್ಕೆ ಬದ್ಧರಾಗಿದ್ದೇವೆ, ಸಚಿವರ ಹೇಳಿಕೆಯನ್ನು ಒಪ್ಪುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. 
SCROLL FOR NEXT