ನವದೆಹಲಿ: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಅವರ ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂಬ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ್ದು, ಬಿಜೆಪಿ ಸಂವಿಧಾನದ ಮೇಲೆ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ನೇರವಾಗಿ ಅಥವಾ ಪರೋಕ್ಷವಾಗಿ ಸಂವಿಧಾನದ ಮೇಲೆ ದಾಳಿ ನಡೆಸುತ್ತಿದೆ, ಕಾಂಗ್ರೆಸ್ ಹಾಗೂ ಅಂಬೇಡ್ಕರ್ ಈ ದೇಶಕ್ಕೆ ನೀಡಿರುವ ಬುನಾದಿಯ ಮೇಲೆ ದಾಳಿ ನಡೆಯುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ನಮ್ಮ ದೇಶದಲ್ಲಿ ಮೋಸಗಾರಿಕೆಯ ಜಾಲ ನಡೆಯುತ್ತಿದೆ. ಸುಳ್ಳನ್ನು ರಾಜಕೀಯ ಲಾಭಕ್ಕಾಗಿ ಬಳಕೆ ಮಾಡಿಕೊಳ್ಳಬಹುದು ಎಂಬ ತತ್ವದಲ್ಲಿ ಬಿಜೆಪಿ ಕಾರ್ಯನಿರ್ವಹಿಸುತ್ತಿದೆ. ಆದರೆ ಕಾಂಗ್ರೆಸ್ ಸತ್ಯದ ಆಧಾರದಲ್ಲಿ ಕಾರ್ಯನಿರ್ವಹಿಸುತ್ತದೆ. ನಾವು ಸತ್ಯವನ್ನು ಒಪ್ಪಿಕೊಳ್ಳುತ್ತೇವೆ, ಸತ್ಯಕ್ಕಾಗಿ ಹೋರಾಡುತ್ತೇವೆ. ಅದೇ ಬಿಜೆಪಿಗೂ ನಮಗೂ ಇರುವ ವ್ಯತ್ಯಾಸ ಎಂದು ರಾಹುಲ್ ಗಾಂಧಿ ಪಕ್ಷದ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಹೇಳಿದ್ದಾರೆ.