ಮೆಹಬೂಬಾ ಮುಫ್ತಿ, ತಸದಕ್ ಮುಫ್ತಿ 
ದೇಶ

ಕಾಶ್ಮೀರ ನೂತನ ಸಚಿವರಾಗಿ ಸಿಎಂ ಮೆಹಬೂಬಾ ಮುಫ್ತಿ ಸಹೋದರ ಪ್ರಮಾಣ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರ ಸಹೋದರ ತಸದಕ್ ಹುಸೇನ್ ಮುಫ್ತಿ ಹಾಗೂ ಶಾಸಕ ಜಾವೇದ್....

ಜಮ್ಮು: ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರ ಸಹೋದರ ತಸದಕ್ ಹುಸೇನ್ ಮುಫ್ತಿ ಹಾಗೂ ಶಾಸಕ ಜಾವೇದ್ ಮುಸ್ತಾಫಾ ಮಿರ್ ಅವರು ಪಿಡಿಪಿ-ಬಿಜೆಪಿ ಮೈತ್ರಿಕೂಟ ಸರ್ಕಾರದ ನೂತನ ಸಚಿವರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.
ಇಂದು ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ತಸದಕ್ ಮುಫ್ತಿ ಹಾಗೂ ಜಾವೇದ್ ಮುಸ್ತಾಫಾ ಮಿರ್ ಅವರಿಗೆ ರಾಜ್ಯಪಾಲ ಎನ್ ಎನ್ ವೊಹ್ರಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಇಬ್ಬರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ವೃತ್ತಿ ನಿರತ ಛಾಯಾಗ್ರಹಕರಾಗಿದ್ದ ತಸದಕ್ ಮುಫ್ತಿ ಅವರು ತಮ್ಮ ತಂದೆ, ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ನಿಧನದ ನಂತರ ಸಹೋದರ ಮೆಹಬೂಬಾ ಮುಫ್ತಿಗೆ ಹಾಗೂ ತಾಯಿಗೆ ಬೆಂಬಲ ನೀಡುವುದಕ್ಕಾಗಿ ರಾಜಕೀಯ ಪ್ರವೇಶಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!