ನವದೆಹಲಿ: ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿರುವ ತ್ರಿವಳಿ ತಲಾಖ್ ಮಸೂದೆ ಬಗ್ಗೆ ಎಂಐಎಂ ಸಂಸದ ಅಸಾವುದ್ದೀನ್ ಒವೈಸಿ ಪ್ರತಿಕ್ರಿಯೆ ನೀಡಿದ್ದು, ಮಸೂದೆ ಮುಸ್ಲಿಂ ಮಹಿಳೆಯರ ವಿರೋಧಿಯಾಗಿದೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಮಂಡಿಸಿರುವ ತ್ರಿವಳಿ ತಲಾಖ್ ಮಸೂದೆ ಮೂಲಭೂತ ಹಕ್ಕುಗಳಿಗೆ ವಿರೋಧಿಯಾಗಿದೆ. ಮುಸಲ್ಮಾನ್ ಮಹಿಳೆಯರ ಅಧಿಕಾರಕ್ಕೆ ಧಕ್ಕೆ ಉಂಟು ಮಾಡುತ್ತದೆ ಎಂದು ಒವೈಸಿ ಹೇಳಿದ್ದಾರೆ. ಅಷ್ಟೇ ಅಲ್ಲದೇ ತ್ರಿವಳಿ ತಲಾಖ್ ಮಸೂದೆಯನ್ನು ರೂಪಿಸಬೇಕಾದರೆ ಮುಸ್ಲಿಂ ಸಮುದಾಯದವರ ಅಭಿಪ್ರಾಯ ಸಂಗ್ರಹಿಸಿಲ್ಲ ಎಂದು ಒವೈಸಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.