ದೇಶ

ಕಪಾಳಕ್ಕೆ ಹೊಡೆದ ಕಾಂಗ್ರೆಸ್ ಶಾಸಕಿ: ಸಿಟ್ಟಿಗೆದ್ದು ಶಾಸಕಿಗೇ ಕಪಾಳಮೋಕ್ಷ ಮಾಡಿದ ಮಹಿಳಾ ಪೇದೆ

Manjula VN
ಶಿಮ್ಲಾ: ಭದ್ರತೆಯೊದಗಿಸುತ್ತಿದ್ದ ಮಹಿಳಾ ಪೇದೆಯೊಬ್ಬರ ಮೇಲೆ ಕಾಂಗ್ರೆಸ್ ಶಾಸಕಿಯೊಬ್ಬರು ಕಪಾಳಕ್ಕೆ ಹೊಡೆದಿದ್ದು, ಶಾಸಕಿಯ ವರ್ತನೆಗೆ ಕೆಂಡಾಮಂಡಲಗೊಂಡ ಮಹಿಳಾ ಪೇದೆ ಶಾಸಕಿಗೇ ಕಪಾಳಮೋಕ್ಷ ಮಾಡಿರುವ ಘಟನೆಯೊಂದು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಶುಕ್ರವಾರ ನಡೆದಿದೆ. 
ಇಂದು ಬೇಳಿಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಚುನಾವಣಾ ಸೋಲಿನ ಪರಮಾರ್ಶೆ ಸಭೆಯನ್ನು ನಡೆಸುತ್ತಿದ್ದರು. ಈ ವೇಳೆ ಹಲವು ಶಾಸಕರು ಹಾಗೂ ಪಕ್ಷದ ನಾಯಕರನ್ನು ಸಭೆಗೆ ಕರೆದಿದ್ದಾರೆ. 
ಇದರಂತೆ ಆಶಾ ಕುಮಾರಿ ಕೂಡ ಸಭೆಗೆ ಹಾಜರಾಗುವ ಸಲುವಾಗಿ ಸ್ಥಳಕ್ಕೆ ತೆರಳಿದ್ದಾರೆ. ಆದರೆ, ಪೊಲೀಸರು ಸಭೆಯಲ್ಲಿ ಪಾಲ್ಗೊಳ್ಳಲು ಆಶಾ ಕುಮಾರಿಯವರಿಗೆ ಅವಕಾಶ ನೀಡಿಲ್ಲ. ಇದರಿಂದಾಗಿ ಕೆಂಡಾಮಂಡಲಗೊಂಡಿದ್ದ ಆಶಾ ಕುಮಾರಿಯವರು ಸ್ಥಳದಲ್ಲಿದ್ದ ಮಹಿಳಾ ಪೇದೆಯ ಕಪಾಳಕ್ಕೆ ಹೊಡೆದಿದ್ದಾರೆ.
ಶಾಸಕಿಯ ಈ ವರ್ತನೆ ಕಂಡು ಕೆಂಡಾಮಂಡಲಗೊಂಡ ಮಹಿಳಾ ಪೇದೆ ಶಾಸಕಿ ಕೆನ್ನೆಗೆ ಬಾರಿಸಿದ್ದಾರೆ. ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವಿಡಿಯೋ ವೈರಲ್ ಆಗುತ್ತಿದೆ. 
ಆಶಾ ಕುಮಾರಿಯವರು ಪಂಜಾಬ್ ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿದ್ದು, ಇತ್ತೀಚೆಗಷ್ಟೇ ಹಿಮಾಚಲ ಪ್ರದೇಶದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಡಾಲ್'ಹೌಸಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. 
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಪ್ರಸ್ತುತ ಶಿಮ್ಲಾದಲ್ಲಿದ್ದು, ಇತ್ತೀಚೆಗಷ್ಟೇ ಹಿಮಾಚಲ ಪ್ರದೇಶದಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ಕಾರಣಗಳೇನು ಎಂಬುದರ ಕುರಿತಂತೆ ಪರಾಮರ್ಶೆ ನಡೆಸಲು ಇಂದು ಸಭೆಯನ್ನು ನಡೆಸುತ್ತಿದ್ದರು. ಪಕ್ಷದ ನಾಯಕರು, ಅಭ್ಯರ್ಥಿಗಳು, ಶಾಸಕರು ಹಾಗೂ ಜಿಲ್ಲಾಧ್ಯಕ್ಷರನ್ನು ಸಭೆಗೆ ಕರೆದಿ ಚುನಾವಣೆ ಸೋಲಿಗೆ ಕಾರಣಗಳೇನು ಎಂಬುದರ ಕುರಿತಂತೆ ಚರ್ಚೆ ನಡೆಸಲು ಸಭೆ ಕರೆದಿದ್ದರು. ಈ ವೇಳೆ ಘಟನೆ ನಡೆದಿದೆ. 
SCROLL FOR NEXT