ಸಂಸತ್ ಭವನ 
ದೇಶ

ಲೋಕಸಭೆಯಲ್ಲಿ ದಿವಾಳಿತನ ಸಂಹಿತೆ ತಿದ್ದುಪಡಿ ಮಸೂದೆಗೆ ಅಂಗೀಕಾರ

ದೇಶದಲ್ಲಿ ಕಂಪೆನಿಗಳ ವ್ಯಾಪಾರ, ವಹಿವಾಟಿಗೆ ಅನುಕೂಲವಾಗುವ ದಿವಾಳಿತನ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ದೊರೆತಿದೆ....

ನವದೆಹಲಿ: ದೇಶದಲ್ಲಿ ಕಂಪೆನಿಗಳ ವ್ಯಾಪಾರ, ವಹಿವಾಟಿಗೆ ಅನುಕೂಲವಾಗುವ ದಿವಾಳಿತನ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ದೊರೆತಿದೆ. 
ಲೋಕಸಭೆಯಲ್ಲಿ ದಿವಾಳಿತನ ಮತ್ತು ದಿವಾಳಿತನ ಸಂಹಿತೆ ತಿದ್ದುಪಡಿ 2017ಗೆ ಅಂಗೀಕಾರ ದೊರೆತಿದ್ದು ಇನ್ನು ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರಗೊಳ್ಳಬೇಕಿದೆ. 
ಪರಿಸ್ಥಿತಿ ಮತ್ತು ದಿವಾಳಿ ನೀತಿಸಂಹಿತೆಯಲ್ಲಿ ಕೆಲ ತಿದ್ದುಪಡಿ ತರಲು ನವೆಂಬರ್ 23ರಂದು ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಸಣ್ಣ ಹೂಡಿಕೆದಾರರನ್ನು ರಕ್ಷಿಸುವ ಉದ್ದೇಶದಿಂದ ಈ ಸಂಹಿತೆಯನ್ನು ಜಾರಿಗೆ ತರಲಾಗಿತ್ತು. ಕಾಯ್ದೆ ಜಾರಿಯಾಗುವುದಕ್ಕೂ ಮುನ್ನ ಇದ್ದ ಕಾನೂನನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದ ಕೆಲವು ಕಾರ್ಪೊರೇಟ್ ಸಂಸ್ಥೆಗಳು ಕಪ್ಪುಹಣವನ್ನು ವ್ಯವಸ್ಥಿತವಾಗಿ ಬಳಕೆ ಮಾಡಿಕೊಳ್ಳುತ್ತಿದ್ದವು. ನೂತನ ಕಾನೂನಿನಿಂದ ನಕಲಿ ಸಂಸ್ಥೆಗಳ ಹೆಸರಿನಲ್ಲಿ ನಡೆಯುವ ಮೋಸದ ಪ್ರಕರಣಗಳನ್ನು ಪ್ರತಿ ಬಂಧಿಸಬಹುದಾಗಿದೆ.  
ಈಗಿರುವ ದಿವಾಳಿತನ ಕಾನೂನನ್ನು ಬದಲಾಯಿಸಿ ದಿವಾಳಿತನದ ಸಮಸ್ಯೆಗಳನ್ನು ಬಗೆಹರಿಸಲು ಕಾಲಮಿತಿ ಒದಗಿಸುತ್ತದೆ. ವ್ಯಕ್ತಿಗಳು, ಕಂಪೆನಿಗಳು, ಬ್ಯಾಂಕು, ಸೀಮಿತ ಹೊಣೆಗಾರಿಕೆ ಸಹಭಾಗಿತ್ವ ಮತ್ತು ಪಾಲುದಾರಿಕೆ ಸಂಸ್ಥೆಗಳು ಹೊಸ ಕಾನೂನು ವ್ಯಾಪ್ತಿಗೆ ಒಳಗೊಳ್ಳುತ್ತದೆ. ಕಂಪೆನಿ ಕಾಯ್ದೆಗೆ ತಿದ್ದುಪಡಿ ತಂದು ಕಾರ್ಪೊರೇಟ್ ದಿವಾಳಿತನ ಎದುರಿಸಲು ಸಹಾಯ ಮಾಡುತ್ತದೆ. ಅಲ್ಲದೆ ಸಾಲ ನೀಡಿದವರು ಬೇಗನೆ ಸಾಲವನ್ನು ವಸೂಲು ಮಾಡಿಕೊಳ್ಳಲು ಸಹಕಾರಿಯಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?