ಖುಷ್ಬೂ ಮೆಹ್ತಾ 
ದೇಶ

ಮುಂಬೈ ಅಗ್ನಿ ದುರಂತ: ಹುಟ್ಟುಹಬ್ಬ ಸಂಭ್ರಮದ ಖುಷಿಯಲ್ಲೇ ಮೃತಪಟ್ಟ ಯುವತಿ

ಮುಂಬೈನ ಲೋವರ್ ಪಾರೆಲ್ ನಲ್ಲಿರುವ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸುಮಾರು 15 ಮಂದಿ ಮೃತಪಟ್ಟಿದ್ದು ಈ ಪೈಕಿ ತನ್ನ ಹುಟ್ಟುಹಬ್ಬದ...

ಮುಂಬೈ: ಮುಂಬೈನ ಲೋವರ್ ಪಾರೆಲ್ ನಲ್ಲಿರುವ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸುಮಾರು 15 ಮಂದಿ ಮೃತಪಟ್ಟಿದ್ದು ಈ ಪೈಕಿ ತನ್ನ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಯುವತಿಯು ಕೂಡ ಅಸುನೀಗಿರುವುದು ನೋವಿನ ಸಂಗತಿಯಾಗಿದೆ. 
29 ವರ್ಷದ ಖುಷ್ಬೂ ಮೆಹ್ತಾ ನಿನ್ನೆ ರಾತ್ರಿ ಹುಟ್ಟಹಬ್ಬ ಆಚರಿಸಿಕೊಳ್ಳುವ ಸಲುವಾಗಿ ಸ್ನೇಹಿತರನ್ನು ಕರೆದಿದ್ದಳು. ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾಗ ಅಗ್ನಿ ದುರಂತ ಸಂಭವಿಸಿದ್ದು ರೆಸ್ಟೋರೆಂಟ್ ನ ವಾಶ್ ರೂಂನಲ್ಲಿ ಸಿಲುಕಿ ಖುಷ್ಬೂ ಸಾವನ್ನಪ್ಪಿದ್ದಾಳೆ. 
ಕಟ್ಟಡದ ಕಮಲ ಮಿಲ್ಸ್ ನ ರೆಸ್ಟೋರೆಂಟ್ ನಲ್ಲಿ ಮಧ್ಯರಾತ್ರಿ ಈ ಅಗ್ನಿ ದುರಂತ ಸಂಭವಿಸಿತ್ತು. ಇದುವರೆಗೂ ಉಸಿರುಗಟ್ಟಿ 15 ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ 11 ಮಂದಿ ಮಹಿಳೆಯರು ಸೇರಿದ್ದಾರೆ. ಇನ್ನು 19 ಮಂದಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

SCROLL FOR NEXT