ಸಂಗ್ರಹ ಚಿತ್ರ 
ದೇಶ

ರಜನಿಕಾಂತ್ ರಾಜಕೀಯ ಪ್ರವೇಶದ ಕುರಿತು ಕಮಲ್ ಹಾಸನ್ ಏನು ಹೇಳಿದರು ಗೊತ್ತಾ?

ತೀವ್ರ ಕುತೂಹಲ ಕೆರಳಿಸಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಅವರ ರಾಜಕೀಯ ಪ್ರವೇಶ ಕುತೂಹಲಕ್ಕೆ ತೆರೆ ಬಿದ್ದಿದ್ದು, ಇದೀಗ ಸ್ವತಃ ರಜನಿಕಾಂತ್ ಅವರು ಹೊಸ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಚೆನ್ನೈ: ತೀವ್ರ ಕುತೂಹಲ ಕೆರಳಿಸಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಅವರ ರಾಜಕೀಯ ಪ್ರವೇಶ ಕುತೂಹಲಕ್ಕೆ ತೆರೆ ಬಿದ್ದಿದ್ದು, ಇದೀಗ ಸ್ವತಃ ರಜನಿಕಾಂತ್ ಅವರು ಹೊಸ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ರಜನಿ ರಾಜಕೀಯ ಪ್ರವೇಶ ಇದೀಗ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಸೃಷ್ಟಿ ಮಾಡಿದ್ದು, ಈ ಸಂಬಂಧ ರಜನಿಕಾಂತ್ ಅವರ ಸಮಕಾಲೀನ ನಟ ಮತ್ತೋರ್ವ ಸೂಪರ್ ಸ್ಟಾರ್ ಕಮಲ್ ಹಾಸನ್ ರಜನಿ ರಾಜಕೀಯ  ಪ್ರವೇಶ ಸಂಬಂಧ ಪ್ರತಿಕ್ರಿಯೆ ನೀಡಿದ್ದಾರೆ. "ರಜನಿಕಾಂತ್ ರಾಜಕೀಯ ಪ್ರವೇಶ ಖುಷಿ ತಂದಿದೆ. ಸಹೋದರ ರಜನಿಕಾಂತ್ ಅವರ ಸಾಮಾಜಿಕ ಪ್ರಜ್ಞೆಯನ್ನು ನಾನು ಬಲ್ಲೆ. ಹೀಗಾಗಿ ಅವರಿಗೆ ನಾನು ಶುಭ ಕೋರುತ್ತೇನೆ ಎಂದು  ಕಮಲ್ ಹಾಸನ್ ಹೇಳಿದ್ದಾರೆ.
ಇನ್ನು ಸ್ವತಃ ಕಮಲ್ ಹಾಸನ್ ಕೂಡ ಈ ಹಿಂದೆ ತಾವು ರಾಜಕೀಯ ಪ್ರವೇಶ ಮಾಡುವುದಾಗಿ ಘೋಷಣೆ ಮಾಡಿದ್ದರು. ಅದರೆ ಕಮಲ್ ಹಾಸನ್ ಸ್ವಂತ ಪಕ್ಷ ಕಟ್ಟುತ್ತಾರೋ ಅಥವಾ ಮತ್ತೊಂದು ರಾಜಕೀಯ ಪಕ್ಷ ಸೇರುತ್ತಾರೋ ಎಂಬ  ಕುತೂಹಲ ಹಾಗೆಯೇ ಉಳಿದಿದೆ. ಏತನ್ಮಧ್ಯೆ ಈ ಹಿಂದೆ ಕಮಲ್ ಹಾಸನ್ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರನ್ನು ಭೇಟಿ ಚರ್ಚಿಸಿದ್ದರು. ಇದು ಅವರು ಕಮ್ಯುನಿಸ್ಟ್ ಪಕ್ಷ ಸೇರುತ್ತಾರೆ ಎಂಬ ಮಾತುಗಳು ಕೇಳಿ ಬಂದಿತ್ತು.
ಒಟ್ಟಾರೆ ಇದೀಗ ತಮಿಳುನಾಡು ರಾಜಕೀಯ ಯುಗದಲ್ಲಿ ಹೊಸ ಅಧ್ಯಾಯ ಆರಂಭವಾಗಿದ್ದು, ರಜನಿ ರಾಜಕೀಯ ಪ್ರವೇಶ ಹೊಸ ಸಂಚಲನ ಸೃಷ್ಟಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!