ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿದ ಪಾಕ್- ಓರ್ವ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ರಜೌರಿ ಹಾಗೂ ಪೂಂಚ್ ಜಿಲ್ಲೆಗಳ ಗಡಿ ನಿಯಂತ್ರಣ ರೇಖೆ ಬಳಿಕ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಭಾರತೀಯ ಯೋಧ ಹುತಾತ್ಮರಾಗಿರುವುದಾಗಿ...
ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಹಾಗೂ ಪೂಂಚ್ ಜಿಲ್ಲೆಗಳ ಗಡಿ ನಿಯಂತ್ರಣ ರೇಖೆ ಬಳಿಕ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಭಾರತೀಯ ಯೋಧ ಹುತಾತ್ಮರಾಗಿರುವುದಾಗಿ ಭಾನುವಾರ ತಿಳಿದುಬಂದಿದೆ.
ರಜೌರಿ ಜಿಲ್ಲೆಯ ನೌಶೆರಾ ಸೆಕ್ಟರ್'ನ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ಹಾಗೂ ಶೆಲ್ ದಾಳಿಗಳನ್ನು ನಡೆಸಿದೆ. ಪರಿಣಾಮ ಓರ್ವ ಯೋಧ ಹುತಾತ್ಮನಾಗಿದ್ದಾನೆಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಇದಲ್ಲದೆ ಪೂಂಚ್ ಜಿಲ್ಲೆಯ ದಿಗ್ವಾಗ್ ಸೆಕ್ಟರ್ ಬಳಿಯೂ ಪಾಕಿಸ್ತಾನ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ತಿಳಿಸಿದ್ದಾರೆ.
ಇಂದು ಬೆಳಗಿನ ಜಾವ 1 ಗಂಟೆಯಿಂದ 5.30ರವರೆಗೂ ಗಡಿಯಲ್ಲಿ ಪಾಕಿಸ್ತಾನ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.