ಚೆನ್ನೈನಲ್ಲಿ ರಜನಿಕಾಂತ್ 
ದೇಶ

ಸತ್ಯ, ಪ್ರಾಮಾಣಿಕ ಕೆಲಸ ಮತ್ತು ಅಭಿವೃದ್ಧಿಯೇ ತಮ್ಮ ಪಕ್ಷದ ಮೂಲಮಂತ್ರ: ರಜನಿಕಾಂತ್

ಸತ್ಯ, ಪ್ರಾಮಾಣಿಕ ಕೆಲಸ ಮತ್ತು ಅಭಿವೃದ್ಧಿಯೇ ತಮ್ಮ ಹೊಸ ರಾಜಕೀಯ ಪಕ್ಷದ ಮೂಲಮಂತ್ರವಾಗಿರುತ್ತದೆ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಚೆನ್ನೈನಲ್ಲಿ ಘೋಷಣೆ ಮಾಡಿದ್ದಾರೆ.

ಚೆನ್ನೈ: ಸತ್ಯ, ಪ್ರಾಮಾಣಿಕ ಕೆಲಸ ಮತ್ತು ಅಭಿವೃದ್ಧಿಯೇ ತಮ್ಮ ಹೊಸ ರಾಜಕೀಯ ಪಕ್ಷದ ಮೂಲಮಂತ್ರವಾಗಿರುತ್ತದೆ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಚೆನ್ನೈನಲ್ಲಿ ಘೋಷಣೆ ಮಾಡಿದ್ದಾರೆ.
ಚೆನ್ನೈನ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಅಭಿಮಾನಿಗಳ ಭೇಟಿ ಕಾರ್ಯಕ್ರಮದ ಅಂತಿಮ ದಿನವಾದ ಇಂದು ರಜನಿಕಾಂತ್ ತಮ್ಮ ರಾಜಕೀಯ ಪ್ರವೇಶದ ಕುರಿತು ಅಂತಿಮ ನಿರ್ಧಾರ ಪ್ರಕಟಿಸಿದರು. ಈ ವೇಳೆ ತಮ್ಮ ನೂತನ  ಪಕ್ಷದ ಮೂಲಕ ರಾಜಕೀಯ ಪ್ರವೇಶ ಮಾಡಿರುವುದಾಗಿ ಘೋಷಿಸಿದ ರಜನಿಕಾಂತ್ ತಮ್ಮ ಪಕ್ಷ ಸತ್ಯ, ಪ್ರಾಮಾಣಿಕ ಕೆಲಸ ಮತ್ತು ಅಭಿವೃದ್ಧಿಯೇ ತಮ್ಮ ಪಕ್ಷದ ಮೂಲಮಂತ್ರವಾಗಿರುತ್ತದೆ ಎಂದು ಹೇಳಿದ್ದಾರೆ.
ಇನ್ನು ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತು ತಮ್ಮ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ರಜನಿಕಾಂತ್, ಕಳೆದ ಒಂದು ವರ್ಷದಿಂದ ತಮಿಳುನಾಡು ಜನತೆ ಅತ್ಯಂತ ಕೆಟ್ಟ ರಾಜಕೀಯವನ್ನು ನೋಡಿದ್ದಾರೆ. ಕಳೆದೊಂದು  ವರ್ಷಗಳ ಬೆಳವಣಿಗೆಯಿಂದ ಜನ ರೋಸಿಹೋಗಿದ್ದಾರೆ. ರಾಜ್ಯದಲ್ಲಿ ರಾಜಕೀಯ ಭ್ರಷ್ಟಾಚಾರವನ್ನು ತಡೆಯಬೇಕಿದೆ. ರಾಜ್ಯದಲ್ಲಿ ಪ್ರಜಾಪ್ರಭುತ್ವ ಗಂಭೀರ ಸ್ಥಿತಿಯಲ್ಲಿದ್ದು, ಪ್ರಜಾಪ್ರುಭತ್ವವನ್ನು ಉಳಿಸಬೇಕಿದೆ. ಜಾತಿ ಮತ  ಭೇದವಿಲ್ಲದ ಎಲ್ಲರನ್ನೂ ಸಮಾನವಾಗಿ ಕಾಣುವ ಪಕ್ಷ ತಮ್ಮದು. ನನ್ನ ಪಕ್ಷದಲ್ಲಿ ಅಕ್ಷರಸ್ಥರು, ಅನಕ್ಷರಸ್ಥರು ಎಲ್ಲರೂ ಇರುತ್ತಾರೆ ಎಂದು ಹೇಳಿದರು.
ಅಂತೆಯೇ ಜನರ ನನ್ನ ಶಕ್ತಿಯಾಗಿದ್ದು, ನನ್ನ ಎಲ್ಲ ನಿರ್ಧಾರಗಳಿಗೂ ಜನ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸ ನನ್ನಲ್ಲಿದೆ. ನನ್ನ ಜನರ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ. ಹೆಸರು ಹಣಕ್ಕಾಗಿ ರಾಜಕೀಯ ಪ್ರವೇಶ ಮಾಡುತ್ತಿಲ್ಲ. ಉತ್ತಮ ಕೆಲಸ ಉತ್ತಮ ಯೋಚನೆ, ಪ್ರಾಮಾಣಿಕತೆ, ಪಾರದರ್ಶಕತೆ ಮತ್ತು ಪ್ರಜಾಪ್ರಭುತ್ವಕ್ಕಾಗಿ ನನ್ನ ಪಕ್ಷ ಕಾರ್ಯ ನಿರ್ವಹಿಸಲಿದೆ. ತಮಿಳು ಭಾಷೆ ಮತ್ತು ತಮಿಳರಿಗಾಗಿ ನನ್ನ ಹೋರಾಟ ಮುಂದುವರೆಸುತ್ತೇನೆ ಎಂದು  ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!