ವಿದೇಶಾಂಗ ಮಂತ್ರಿ ಸುಷ್ಮಾ ಸ್ವರಾಜ್ 
ದೇಶ

ಟೊಗೊದಲ್ಲಿ ಜೈಲಿನಲ್ಲಿದ್ದ ಐವರು ಭಾರತೀಯರ ಬಿಡುಗಡೆ: ಸುಷ್ಮಾ ಸ್ವರಾಜ್

ಪಶ್ಚಿಮ ಆಫ್ರಿಕಾ ರಾಷ್ಟ್ರವಾದ ಟೊಗೊದಲ್ಲಿ ಕಾರಾಗೃಹದಲ್ಲಿದ್ದ ಕೇರಳ ಮೂಲದ ಐವರು ಭಾರತೀಯರು...

ನವದೆಹಲಿ: ಪಶ್ಚಿಮ ಆಫ್ರಿಕಾ ರಾಷ್ಟ್ರವಾದ ಟೊಗೊದಲ್ಲಿ ಕಾರಾಗೃಹದಲ್ಲಿದ್ದ ಕೇರಳ ಮೂಲದ ಐವರು ಭಾರತೀಯರು ಬಿಡುಗಡೆಯಾಗಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಖಾತೆ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ. ಅವರ ಬಿಡುಗಡೆಗೆ ಭಾರತೀಯ ಮಿಷನ್ ಮತ್ತು ದೂತಾವಾಸಗಳ ಪ್ರಯತ್ನವನ್ನು ಅವರು ಶ್ಲಾಘಿಸಿದ್ದಾರೆ.
ಇಂದು ಟ್ವೀಟ್ ಮಾಡಿರುವ ಅವರು, ಟೊಗೊದ ಜೈಲಿನಲ್ಲಿ ಬಂಧಿತರಾಗಿದ್ದ ಕೇರಳ ಮೂಲದ ಭಾರತೀಯರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡುವಲ್ಲಿ ನಾವು ಸಫಲರಾಗಿದ್ದೇವೆ. ಅಕ್ರಾದಲ್ಲಿನ ಭಾರತೀಯ ಮಿಷನ್ ಮತ್ತು ಟೊಗೊದ ದೂತವಾಸಗಳು ಉತ್ತಮ ಕೆಲಸ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.
ವ್ಯಾಪಾರಿ ನೌಕಾಪಡೆಯಲ್ಲಿ ಉದ್ಯೋಗದಲ್ಲಿದ್ದ ಐವರು ಭಾರತೀಯರನ್ನು 2013ರಲ್ಲಿ ಟೊಗೊದ ತೀರಭಾಗದಲ್ಲಿ ಕಡಲ್ಗಳ್ಳತನ ದಾಳಿಯಲ್ಲಿ ಭಾಗಿಯಾಗಿದ್ದರ ಶಂಕೆಯ ಮೇಲೆ ಬಂಧಿತರಾಗಿದ್ದರು. ಅವರು ಬಂಧಿತರಾಗುವ ವೇಳೆಗೆ ಮುಂಬೈಯಿಂದ ದಕ್ಷಿಣ ಆಫ್ರಿಕಾಕ್ಕೆ ತೆರಳುವ ಹಡಗಿನಲ್ಲಿ ಪ್ರಯಾಣಿಸುತ್ತಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಮೇಲೆ ಹರಿದ ಟ್ರಕ್; 23 ಕುರಿ, 2 ಮೇಕೆ ಸಾವು, ಭೀಕರ ವಿಡಿಯೋ ಸಿಸಿಟಿವಿಯಲ್ಲಿ ಸೆರೆ!

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!