ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಉತ್ತರ ಪ್ರದೇಶದಲ್ಲಿನ 'ಶೂನ್ಯ' ಅಭಿವೃದ್ಧಿಗೂ ಮೋದಿ ಜವಾಬ್ದಾರಿಯೇ: ಅಖಿಲೇಶ್'ಗೆ ಬಿಜೆಪಿ ಪ್ರಶ್ನೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ದೂಷಿಸುವ ಬದಲು ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಮೊದಲು ತಮ್ಮ ವೈಫಲ್ಯಗಳನ್ನು ನೋಡಿಕೊಳ್ಳಬೇಕಿದೆ ಎಂದು ಬಿಜೆಪಿ ಶುಕ್ರವಾರ ಹೇಳಿದೆ...

ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್
Manjula VN
Updated On : 3 Feb 2017, 12:29 pm

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ದೂಷಿಸುವ ಬದಲು ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಮೊದಲು ತಮ್ಮ ವೈಫಲ್ಯಗಳನ್ನು ನೋಡಿಕೊಳ್ಳಬೇಕಿದೆ ಎಂದು ಬಿಜೆಪಿ ಶುಕ್ರವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಉತ್ತರಪ್ರದೇಶ ರಾಜ್ಯ ಬಿಜೆಪಿ ಕಾರ್ಯದರ್ಶಿ ವಿಜಯ್ ಬಹದ್ದೂರ್ ಪಥಕ್ ಅವರು, ಅಖಿಲೇಶ್ ಯಾವದ್ ಅವರ ಸರ್ಕಾರ ಕಳೆದ ಐದು ವರ್ಷಗಳಿಂದ ನೀರು, ವಿದ್ಯುತ್, ಶಿಕ್ಷಣ, ಭದ್ರತೆ, ಆರೋಗ್ಯ ಮತ್ತು ಮೂಲಭೂತ ಸೌಕರ್ಯಗಳ ಕುರಿತಂತೆ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಲಿಲ್ಲ. ಇದಕ್ಕೂ ಪ್ರಧಾನಮಂತ್ರಿಗಳೇ ಜವಾಬ್ದಾರಿಯೇ ಎಂದು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ಏನೇ ಆದರೂ ಅದರ ಜವಾಬ್ದಾರಿ ಅಖಿಲೇಶ್ ಆಗಿರುತ್ತಾರೆ. ದೇಶಕ್ಕೆ ಸಂಬಂಧಿಸಿದ ವಿಚಾರಗಳನ್ನು ಪ್ರಧಾನಮಂತ್ರಿಗಳು ನೋಡಿಕೊಳ್ಳುತ್ತಾರೆ. ರಾಜ್ಯಕ್ಕೆ ಸಂಬಂಧಿಸಿದ ವಿಚಾರಗಳು ಆಯಾ ರಾಜ್ಯಗಳ ಮುಖ್ಯಮಂತ್ರಿಗಳ ಜವಾಬ್ದಾರಿಯಾಗಿರುತ್ತದೆ. ವಂಚಕರ ನಾಯಕತ್ವದಿಂದ ಉತ್ತರಪ್ರದೇಶ ಜನತೆ ಬೇಸತ್ತು ಹೋಗಿದ್ದಾರೆ. ಇದೀಗ ರಾಜ್ಯದ ಜನತೆ ಬದಲಾವಣೆಯನ್ನು ಬಯಸುತ್ತಿದ್ದಾರೆ. ಯಾವುದೇ ಪರಿಸ್ಥಿತಿ ಬಂದರೂ ರೈತರಿಗೆ ಸಹಾಯ ಮಾಡಲು ಬಿಜೆಪಿ ನಿರ್ಧಾರ ಕೈಗೊಂಡಿದೆ. ಪ್ರತೀಯೊಬ್ಬ ಯುವಕನಿಗೂ ಉದ್ಯೋಗ ದೊರಕಿಸಿಕೊಡಲು ಬಿಜೆಪಿ ನಿರ್ಧರಿಸಿದೆ. ಅಲ್ಲದೆ, ನಮ್ಮ ಹೆಣ್ಣುಮಕ್ಕಳ ರಕ್ಷಣೆಗೂ ಬಿಜೆಪಿ ನಿರ್ಧಾರ ತೆಗೆದುಕೊಂಡಿದ್ದು, ಅವರ ವಿಧ್ಯಾಭ್ಯಾಸ ಹಂತವನ್ನು ಅಭಿವೃದ್ಧಿಪಡಿಸುವ ಧ್ಯೇಯವನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement