ಸಾಂದರ್ಭಿಕ ಚಿತ್ರ 
ದೇಶ

ಗೋವಾ ಚುನಾವಣಾ ಸಮರ: 2000 ಲೀಟರ್ ಅಕ್ರಮ ಮದ್ಯ ವಶಕ್ಕೆ

ಗೋವಾ ರಾಜ್ಯದಲ್ಲಿ ಚುನಾವಣೆ ಆರಂಭಗೊಂಡಿರುವ ಬೆನ್ನಲ್ಲೇ ಅಕ್ರಮ ಚಟುವಟಿಕೆಗಳು ಹೆಚ್ಚಾಗತೊಡಗಿವೆ. ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 2,000 ಲೀಟರ್ ಗಳ ಮದ್ಯವನ್ನು ಅಧಿಕಾರಿಗಳು ಶುಕ್ರವಾರ ತಡರಾತ್ರಿ...

ಪಣಜಿ: ಗೋವಾ ರಾಜ್ಯದಲ್ಲಿ ಚುನಾವಣೆ ಆರಂಭಗೊಂಡಿರುವ ಬೆನ್ನಲ್ಲೇ ಅಕ್ರಮ ಚಟುವಟಿಕೆಗಳು ಹೆಚ್ಚಾಗತೊಡಗಿವೆ. ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 2,000 ಲೀಟರ್ ಗಳ ಮದ್ಯವನ್ನು ಅಧಿಕಾರಿಗಳು ಶುಕ್ರವಾರ ತಡರಾತ್ರಿ ವಶಕ್ಕೆ ಪಡೆದಿದ್ದಾರೆ.

ಚುನಾವಣೆ ಹಿನ್ನಲೆಯಲ್ಲಿ ಮತದಾರರಿಗೆ ಆಮಿಷವೊಡ್ಡುವ ಸಲುವಾಗಿ ಮದ್ಯವನ್ನು ದಾಸ್ತಾನು ಮಾಡಲಾಗಿದೆ ಎಂಬ ಖಚಿತ ಮಾಹಿತಿ ಆಧಾರದ ಮೇಲೆ ಎಱಡು ಪ್ರತ್ಯೇಕ ತಾಣಗಳ ಮೇಲೆ ಚುನಾವಣಾ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ರೂ.16.57 ಲಕ್ಷ ಮೌಲ್ಯದ 2,000 ಲೀಟರ್ ಗಳ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ಬಿಟಿಮ್ ನಲ್ಲಿದ್ದ ಹೋಟೆಲ್ ವೊಲಂಟ್ ಹಾಲಿಡೇ ಹೋಮ್ ಮೇಲೆ ದಾಳಿ ಮಾಡಿದ ಅಧಿಕಾರಿಗಳು 1,422 ಲೀಟರ್ ನಷ್ಟು ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಪಣಜಿಯ ಸುಬುರ್ಬ್ ನಲ್ಲಿ ನಡೆಸಲಾದ ದಾಳಿಯಲ್ಲಿ 972 ಲೀಟರ್ ನಷ್ಟು ಮದ್ಯವನ್ನು ವಶಕ್ಕೆ ಪಡೆಯಲಾಯಿತು ಎಂದು ಚುನಾವಣಾಧಿಕಾರಿ ಕುನಾಲ್ ಅವರು ಹೇಳಿದ್ದಾರೆ.

ರೂ.16.57 ಲಕ್ಷದಷ್ಟು ಮದ್ಯವನ್ನು ವಶಕ್ಕೆ ಪಡೆಯಲಾಗಿದ್ದು, ಅಬಕಾರಿ ಕಾಯ್ದೆ ಅಡಿಯಲ್ಲಿ ಈಗಾಗಲೇ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT