ನವದೆಹಲಿ: ಪಂಜಾಬ್ ಹಾಗೂ ಗೋವಾ ರಾಜ್ಯಗಳಲ್ಲಿ ಚುನಾವಣೆ ಆರಂಭಗೊಂಡಿದ್ದರು, ಈ ಹಿನ್ನಲೆಯಲ್ಲಿ ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಕರೆ ನೀಡಿದ್ದಾರೆ.
ಅಬ್ಬರ ಚುನಾವಣಾ ಪ್ರಚಾರಕ್ಕೆ ಸಾಕ್ಷಿಯಾಗಿದ್ದ ಗೋವಾ ಹಾಗೂ ಪಂಜಾಬ್ ರಾಜ್ಯಗಳಲ್ಲಿ ಚುನಾವಣೆ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಾಮಾಜಿಕ ಜಾಲತಾಣ ಟ್ವಿಟರ್ ಪ್ರತಿಕ್ರಿಯೆ ನೀಡಿದ್ದಾರೆ.
ಪಂಜಾಬ್ ಹಾಗೂ ಗೋವಾ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಆರಂಭವಾಗಿದ್ದು, ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಈ ಮೂಲಕ ಮನವಿ ಮಾಡುತ್ತಿದ್ದೇನೆ. ಪ್ರಮುಖವಾಗಿ ನನ್ನ ಯುವ ಸ್ನೇಹಿತರು ಮತದಾನ ಮಾಡುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆಂದು ತಿಳಿಸಿದ್ದಾರೆ.