ಗೌರವ್ ಭಾಟಿಯಾ 
ದೇಶ

ಮತದಾನಕ್ಕೆ 5 ದಿನ ಬಾಕಿ ಇರುವಂತೆ ಸಮಾಜವಾದಿ ಪಕ್ಷ ತೊರೆದ ಗೌರವ್ ಭಾಟಿಯಾ

ಉತ್ತರಪ್ರದೇಶ ವಿಧಾನಸಭೆ ಚುನಾವಣೆ ಮತದಾನಕ್ಕೆ ಇನ್ನು ಐದು ದಿನಗಳು ಬಾಕಿ ಇರುವಂತೆ ಸಮಾಜವಾದಿ ಪಕ್ಷದ ಎಲ್ಲಾ ಸ್ಥಾನಗಳಿಗೂ ಗೌರವ್ ಭಾಟಿಯಾ...

ನವದೆಹಲಿ: ಉತ್ತರಪ್ರದೇಶ ವಿಧಾನಸಭೆ ಚುನಾವಣೆ ಮತದಾನಕ್ಕೆ ಇನ್ನು ಐದು ದಿನಗಳು ಬಾಕಿ ಇರುವಂತೆ ಸಮಾಜವಾದಿ ಪಕ್ಷದ ಎಲ್ಲಾ ಸ್ಥಾನಗಳಿಗೂ ಗೌರವ್ ಭಾಟಿಯಾ ರಾಜಿನಾಮೆ ನೀಡಿದ್ದಾರೆ.

ರಾಷ್ಟ್ರೀಯ ಅಧ್ಯಕ್ಷ ಕಾನೂನು ವಿಂಗ್ ಸೇರಿದಂತೆ ಸಮಾಜವಾದಿ ಪಕ್ಷದ ಎಲ್ಲಾ ಸ್ಥಾನಗಳಿಗೂ ರಾಜಿನಾಮೆ ನೀಡಿರುವುದಾಗಿ ಭಾಟಿಯಾ ಹೇಳಿದ್ದಾರೆ.

ಇಂತಹ ಕಠಿಣ ನಿರ್ಧಾರವನ್ನು ಏತಕ್ಕಾಗಿ ತೆಗೆದುಕೊಂಡಿದ್ದಾಗಿ ಗೌರವ್ ಭಾಟಿಯಾ ಹೇಳಿಲ್ಲ. ಆದರೆ ತಮ್ಮ ರಾಜಿನಾಮೆ ಪತ್ರವನ್ನು ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಮತ್ತು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರಿಗೆ ರವಾನಿಸಿರುವುದಾಗಿ ತಿಳಿಸಿದ್ದಾರೆ.

ಕೆಲ ದಿನಗಳಿಂದ ಸಮಾಜವಾದಿ ಪಕ್ಷದಲ್ಲಿ ರಾಜಿನಾಮೆ ಪರ್ವ ಮುಂದುವರೆದಿದೆ. ಮುಲಾಯಂ ಸಿಂಗ್ ಯಾದವ್ ಆಪ್ತ ಅಂಬಿಕಾ ಚೌಧರಿ, ಅಶು ಯಾದವ್ ಪಕ್ಷದಿಂದ ಹಿಂದೆ ಸರಿದಿದ್ದರು.

ಎರಡು ಹಂತಗಳಲ್ಲಿ ಉತ್ತರಪ್ರದೇಶ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದೆ. ಫೆಬ್ರವರಿ 11 ಮತ್ತು 15 ರಂದು ಮತದಾನ ನಡೆಯಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ ಇಲ್ನೋಡಿ, ಪುಡಿ ರೌಡಿಗಳ ಹಾವಳಿ : Parameshwar ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT