ಘಾಜಿಯಾಬಾದ್: ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ತ್ರಿವಳಿ ತಲಾಖ್ ನಿಷೇಧಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಂತರ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದು ಹೇಳುವ ಮೂಲಕ ತಲಾಖ್ ಗೆ ನಿಷೇಧ ಹೇರುವ ಸೂಚನೆ ನೀಡಿದ್ದಾರೆ.
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಮಹಿಳೆಯರಿಗೆ ಗೌರವ ಕೊಡದ ಸಂಪ್ರದಾಯಗಳನ್ನು ನಿಷೇಧಿಸಬೇಕಿದೆ. ಉತ್ತರ ಪ್ರದೇಶ ಚುನಾವಣೆ ನಂತರ ಸರ್ಕಾರ ಇಂತಹ ಸಮಾಜ ಘಾತುಕ ಚಟುವಟಿಕೆಗಳ ಮೇಲೆ ನಿಷೇಧ ಹೇರುವ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಈ ವಿಷಯ ಧರ್ಮಕ್ಕೆ ಸಂಬಂಧಿಸಿದ್ದಲ್ಲ. ಬದಲಾಗಿ ಮಹಿಳೆಯರ ಸ್ವಾತಂತ್ರ್ಯ ಹಾಗೂ ಘನತೆಗೆ ಸಂಬಂಧಿಸಿದ ವಿಚಾರವಾಗಿದೆ ಎಂದು ಕೇಂದ್ರ ಸಚಿವರು ಸ್ಪಷ್ಟಪಡಿಸಿದ್ದಾರೆ.