ಪುಣೆ: 42 ವರ್ಷದ ವ್ಯಕ್ತಿಯೊಬ್ಬರು ತನ್ನ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಭಾನುವಾರ ಪುಣೆಯ ಅಂಬೆಗಾಂವನಲ್ಲಿ ನಡೆದಿದೆ.
ದೀಪಕ್ ಹಂಡೆ ಎಂಬುವವರು ಇಂದು ಬೆಳಗಿನ ಜಾವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ತನ್ನ ಸಾವಿಗೆ ತಾನೇ ಕಾರಣ ಎಂದು ಬರೆದಿರುವುದಾಗಿ ಭಾರ್ತಿ ವಿದ್ಯಾಪೀಠ ಪೊಲೀಸ್ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ದೀಪಕ್ ಹಂಡೆ ಅವರು ತನ್ನ ಪತ್ನಿ ಸ್ವಾತಿ(35) ಹಾಗೂ ಮಕ್ಕಳಾದ ತೇಜಸ್(16) ಮತ್ತು ವೈಷ್ಣವಿ(12)ಯನ್ನು ಕತ್ತು ಹಿಸುಕಿ ಸಾಯಿಸಿ ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಮರಣೋತ್ತರ ಪರೀಕ್ಷೆಯ ನಂತರವೇ ಸಾವಿಗೆ ನಿಕರವಾದ ಕಾರಣ ಏನು ಎಂಬುದು ತಿಳಿಯಲಿದೆ ಎಂದು ಪೊಲೀಸರು ಹೇಳಿದ್ದಾರೆ.