ದೇಶ

ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿದ ಪಾಕ್, ಸೇನೆಯಿಂದ ದಿಟ್ಟ ಉತ್ತರ

Manjula VN

ಸಾಂಬಾ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರ್ ಬಳಿಯಿರುವ ಅಂತರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಕದನ ವಿರಾಮ ಉಲ್ಲಂಘಟನೆಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಸೋಮವಾರ ತಿಳಿದುಬಂದಿದೆ.

ಇಂದು ಬೆಳಿಗ್ಗೆ 8.45ರ ಸುಮಾರಿಗೆ ಪಾಕಿಸ್ತಾನ ಸೇನೆ ಭಾರತೀಯ ಸೇನೆ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದೆ. ನಂತರ 9.45ರ ಸುಮಾರಿಗೆ ಗುಂಡಿನ ದಾಳಿ ಜೊತೆಗೆ 51 ಎಂಎಂ ಮಾರ್ಟರ್ ಶೆಟ್ ದಾಳಿಯನ್ನು ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಪಾಕಿಸ್ತಾನ ಸೇನೆಯ ಕದನ ವಿರಾಮ ಉಲ್ಲಂಘನೆಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದ್ದು, ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ವರದಿಗಳಿಂದ ತಿಳಿದುಬಂದಿದೆ.

SCROLL FOR NEXT