ಶಶಿಕಲಾ-ಜಯಲಲಿತಾ 
ದೇಶ

ಶಶಿಕಲಾ, ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ: ಮುಂದಿನ ವಾರ ಸುಪ್ರೀಂ ತೀರ್ಪು

ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಹಾಗೂ ತಮಿಳುನಾಡಿನ ಭಾವಿ ಸಿಎಂ ಶಶಿಕಲಾ ಅವರ ಅಕ್ರಮ ಆಸ್ತಿ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್ ಮುಂದಿನ ವಾರ ತೀರ್ಪು ನೀಡುವ ಸಾಧ್ಯತೆ ಇದೆ.

ನವದೆಹಲಿ: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಹಾಗೂ ತಮಿಳುನಾಡಿನ ಭಾವಿ ಸಿಎಂ ಶಶಿಕಲಾ ಅವರ ಅಕ್ರಮ ಆಸ್ತಿ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್ ಮುಂದಿನ ವಾರ ತೀರ್ಪು ನೀಡುವ ಸಾಧ್ಯತೆ ಇದೆ. 
ನ್ಯಾ.ಪಿಸಿ ಘೋಸೆ ಹಾಗೂ ಅಮಿತಾವ್ ರಾಯ್ ಅವರ ವಿಭಾಗೀಯ ಪೀಠ ತೀರ್ಪು ನೀಡಲಿದೆ. ಜಯಲಲಿತಾ ಅವರ ಹಳೆಯ ಮೂರು ಪ್ರಕರಣಗಳ ತೀರ್ಪನ್ನು ಮೂರು ತಿಂಗಳ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಆದರೆ ಈಗ ಜಯಲಲಿತಾ ಅವರು ಇಹಲೋಕ ತ್ಯಜಿಸಿದ್ದು, ಸಿಎಂ ಆಗಲು ಹೊರಟಿರುವ ಜಯಲಿತಾ ಆಪ್ತೆ ಶಶಿಕಾಲಾ ಅವರಿಗೆ ಕೋರ್ಟ್ ತೀರ್ಪು ಪರಿಣಾಮ ಬೀರಲಿದೆ. 
ಜಯಲಿತಾ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು. ಕರ್ನಾಟಕ ಸರ್ಕಾರದ ಪರವಾಗಿ ವಾದ ಮಡಿಸಿರುವ ದುಷ್ಯಂತ್ ದಾವೆ, ಮೂರು ತಿಂಗಳ ಹಿಂದೆ ಕೋರ್ಟ್ ಕಾಯ್ದಿರಿಸಿರುವ ತೀರ್ಪಿನ ಬಗ್ಗೆ ನ್ಯಾಯಪೀಠಕ್ಕೆ ನೆನಪಿಸಿದ್ದಾರೆ. 
ಶಶಿಕಲಾ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಸಿದ್ಧತೆ ನಡೆಸುತ್ತಿರುವ ವೇಳೆಯಲ್ಲೇ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟವಾಗಲಿರುವುದು ಕುತೂಹಲ ಮೂಡಿಸಿದೆ.

ಶಶಿಕಲಾ ನಟರಾಜನ್‌  ಇದೇ ಭಾನುವಾರ ತಮಿಳುನಾಡು ಎಐಎಡಿಎಂಕೆ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು. ಮುಖ್ಯಮಂತ್ರಿಯಾಗಿ ಇದೇ ಫೆಬ್ರವರಿ 9 ರಂದು  ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್