ನವದೆಹಲಿ: ಇ. ಅಹಮದ್ ಅವರ ನಿಧನ ಬಳಿಕವೂ ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿ, ಸಂಸತ್ತಿನ ಮಹಾತ್ಮ ಗಾಂಧಿ ಪ್ರತಿಮೆ ಎದಿರು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಧರಣಿ ನಡೆಸುತ್ತಿದ್ದಾರೆ.
ಬಜೆಟ್ ಅಧಿವೇಶನದ ಮೊದಲ ದಿನ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಭಾಷಣ ಮಾಡುತ್ತಿದ್ದ ವೇಳೆಯೇ ಮಾಜಿ ಸಚಿವ ಇ. ಅಹಮದ್ ಅವರು ಹೃದಯಾಘಾತಕ್ಕೆ ಒಳಗಾಗಿ ನಿಧನ ಹೊಂದಿದ್ದರು. ಫೆ.1 ರಂದು ಕೇಂದ್ರ ಬಜೆಟ್ ಮಂಡನೆ ಮಾಡಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿತ್ತು. ಇ. ಅಹಮದ್ ಅವರು ನಿಧರ ಹೊಂದಿರುವ ಹಿನ್ನಲೆಯಲ್ಲಿ ಬಜೆಟ್ ನ್ನು ಮೂಂದೂಡಬೇಕೆಂದು ಆಗ್ರಹಿಸಿದ್ದವು. ಸಾಕಷ್ಟು ವಿರೋಧಗಳ ನಡುವೆಯೂ ಕೇಂದ್ರ ಬಜೆಟ್ ಮಂಡನೆ ಮಾಡಿತ್ತು.
ಇಂದು ಸಂಸತ್ತಿನಲ್ಲಿ ಬಜೆಟ್ ಅಧಿವೇಶನ ಆರಂಭವಾಗಿರುವ ಹಿನ್ನಲೆಯಲ್ಲಿ ಸಂಸತ್ತಿನ ಗಾಂಧಿ ಪ್ರತಿಮೆ ಬಳಿ ಕೇರಳ ರಾಜ್ಯ ಸಂಸದರು ಹಾಗೂ ಕಾಂಗ್ರೆಸ್ ಸಂಸದರು ಧರಣಿ ಕುಳಿತು ಕೇಂದ್ರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರೂ ಕೂಡ ಕೈಜೋಡಿಸಿದ್ದು, ಸಂಸದರು ಬಾಯಿಗೆ ಕಪ್ಪು ಪಟ್ಟಿಯನ್ನು ಧರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.