ಸಾಂದರ್ಭಿಕ ಚಿತ್ರ 
ದೇಶ

ಮುಂಬೈ-ಗೋವಾ ಹೆದ್ದಾರಿಯಲ್ಲಿ ಕಾರು ಮರಕ್ಕೆ ಡಿಕ್ಕಿ: 7 ಮಂದಿ ದಾರುಣ ಸಾವು

ವೇಗವಾಗಿ ಬರುತ್ತಿದ್ದ ಕಾರು ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಮೃತಪಟ್ಟು ಒಬ್ಬರು...

ಮುಂಬೈ: ವೇಗವಾಗಿ ಬರುತ್ತಿದ್ದ ಕಾರು ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಮೃತಪಟ್ಟು ಒಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಕೊಂಕಣ್ ಪ್ರಾಂತ್ಯದ ರತ್ನಗಿರಿ ಜಿಲ್ಲೆಯ ಮುಂಬೈ-ಗೋವಾ ಹೆದ್ದಾರಿಯಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.
ಮೃತಪಟ್ಟವರೆಲ್ಲಾ ಮುಂಬೈ ಮೂಲದವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಗ್ಗೆ 7.40ರ ಸುಮಾರಿಗೆ ಈ ದುರ್ಘಟನೆ ನಡೆದಿದ್ದು ಕಾರು ಗೋವಾ ಕಡೆಗೆ ಹೋಗುತ್ತಿತ್ತು. ಚಾಲಕ ನಿಯಂತ್ರಣ ತಪ್ಪಿದ್ದರಿಂದ ಕಾರು ರಸ್ತೆಬದಿಯಲ್ಲಿದ್ದ ಮರಕ್ಕೆ ಅಪ್ಪಳಿಸಿತು. ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನೆಲ್ಲಾ ರತ್ನಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ವರು ಆಸ್ಪತ್ರೆಗೆ ತಲುಪುವ ಮುನ್ನ ಮೃತಪಟ್ಟಿದ್ದಾರೆ.
ಸಾವಿಗೀಡಾದವರನ್ನು ಪ್ರಶಾಂತ್ ಗೌರವ್, ಸಚಿನ್ ಸಾವಂತ್, ಅಕ್ಷಯ್ ಕರೇಕರ್, ಮಯೂರ್ ಪೆಡ್ನೆಕರ್, ನಿಹಾಲ್ ಕೊಲೆಕರ್, ಕೇದಾರ್ ಕೊಲೆಕರ್ ಮತ್ತು ವೈಭವ್ ಮಾನವೆ ಎಂದು ಗುರುತಿಸಲಾಗಿದೆ.
ರತ್ನಗಿರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

BSPಯಲ್ಲಿ ಮಹಾ ಬಿರುಕು: ಅಶೋಕ್ ಸಿದ್ಧಾರ್ಥ್ ನಿವೃತ್ತಿ ಬೆನ್ನಲ್ಲೇ ಸೋದರಳಿಯ ಆಕಾಶ್ ಆನಂದ್‌ನನ್ನು ಪಕ್ಷದ ಜವಾಬ್ದಾರಿಗಳಿಂದ ಕಿತ್ತೊಗೆದ ಮಾಯಾವತಿ..!

‘BRICS‌ ನಿಂದ ಭಾರತಕ್ಕೇನು ಲಾಭ?’: ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಪ್ರಶ್ನೆ, ತಿರುಗೇಟು ಕೊಟ್ಟ BJP

Trumpಗೆ Iran ಬಿಗ್ ಶಾಕ್: ಅಮೆರಿಕಾ ಹಡಗು ಸೇರಿ 20ಕ್ಕೂ ಹೆಚ್ಚು ನೌಕೆಗಳ ಮೇಲೆ ದಾಳಿ, Hormuz ಜಲಸಂಧಿ ಹೊರಗೂ 'No-go zone' ವಿಸ್ತರಣೆ..!

Cricket: ಇಂಗ್ಲೆಂಡ್ ನಲ್ಲೂ ಪಾಕಿಸ್ತಾನ ಕ್ರಿಕೆಟಿಗರಿಗೆ ಮುಖಭಂಗ, ವಲಸಿಗರೆಂದು ತಪ್ಪಾಗಿ ಭಾವಿಸಿ ಪ್ರತಿಭಟನೆ! ಮುಂದೇನಾಯ್ತು?

2.5 ಲಕ್ಷ ರೂ ಸಾಲಶೂಲಕ್ಕೆ ಸಿವಿಲ್ ಸರ್ವಿಸ್ ಆಕಾಂಕ್ಷಿ ಬಲಿ; ಸಾವಿಗೂ ಮುನ್ನ 19 ಮಂದಿಯ ಹೆಸರುಗಳ ಉಲ್ಲೇಖ!