ತಮಿಳುನಾಡು ರಾಜಕೀಯ ಬಿಕ್ಕಟ್ಟಿಗೆ ಕೇಂದ್ರ ಸರ್ಕಾರವನ್ನು ದೂಷಿಸಿದ ಕಾಂಗ್ರೆಸ್
ತಮಿಳುನಾಡಿನಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿಗೆ ಕೇಂದ್ರ ಸರ್ಕಾರ ಕಾರಣ ಎಂದು ಕಾಂಗ್ರೆಸ್ ದೂಷಿಸಿದೆ.
ನವದೆಹಲಿ: ತಮಿಳುನಾಡಿನಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿಗೆ ಕೇಂದ್ರ ಸರ್ಕಾರ ಕಾರಣ ಎಂದು ಕಾಂಗ್ರೆಸ್ ದೂಷಿಸಿದೆ.
ಕೇಂದ್ರ ಸರ್ಕಾರ ರಾಜ್ಯಪಾಲ ಸಿ.ವಿದ್ಯಾಸಾಗರ್ ರಾವ್ ಅವರನ್ನು ಬಳಸಿಕೊಂಡು ತಮಿಳುನಾಡು ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿದೆ. ಎಐಎಡಿಎಂಕೆ ಕಾಂಗ್ರೆಸ್ ಗೂ ರಾಜಕೀಯ ಎದುರಾಳಿ, ಆದರೆ ಜನಾದೇಶವನ್ನು ಎಂದಿಗೂ ನಿರ್ಲಕ್ಷಿಸಲು ಸಾಧ್ಯವಿಲ್ಲ, ರಾಜ್ಯಪಾಲರನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಉರುಳಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ವಕ್ತಾರ ರಣ್ ದೀಪ್ ಸಿಂಗ್ ಸುರ್ಜೆವಾಲ ಹೇಳಿದ್ದಾರೆ.
ತಮಿಳುನಾಡಿನಲ್ಲಿ ಉಂಟಾಗಿರುವ ರಾಜಕೀಯ ಪರಿಸ್ಥಿತಿ ಗಂಭೀರ ವಿಷಯವಾಗಿದೆ. ಈ ವಿಚಾರವಾಗಿ ಮೋದಿ ಸರ್ಕಾರ ಇದೇ ರೀತಿ ಮುಂದುವರೆದರೆ ಸಂವಿಧಾನದ ಮೌಲ್ಯಗಳು ನಾಶವಾಗಲಿದೆ ಎಂದು ರಣ್ ದೀಪ್ ಸುರ್ಜೆವಾಲ ಎಚ್ಚರಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.