ಸಂಗ್ರಹ ಚಿತ್ರ 
ದೇಶ

ಎಐಎಡಿಎಂಕೆ ಖಜಾಂಚಿ ಸ್ಥಾನದಿಂದ ಪನ್ನೀರ್ ಸೆಲ್ವಂಗೆ ಖೋಕ್!

ಕ್ಷಿಪ್ರ ರಾಜಕೀಯ ಬೆಳವಣಿಗೆಯಿಂದಾಗಿ ತಮಿಳುನಾಡಿನ ರಾಜ್ಯ ರಾಜಕೀಯದಲ್ಲಿ ಅಲ್ಲೋಲ್ಲ ಕಲ್ಲೋಲವಾಗಿದ್ದು, ಹಂಗಾಮಿ ಸಿಎಂ ಪನ್ನೀರ್ ಸೆಲ್ವಂ ಅವರನ್ನು ಪಕ್ಷದ ಖಜಾಂಚಿ ಸ್ಥಾನದಿಂದ ಕಿತ್ತೊಗೆಯಲಾಗಿದೆ. ಅಲ್ಲದೆ ಪಕ್ಷದಿಂದಲೂ ಉಚ್ಛಾಟನೆ ಮಾಡುವ ಕುರಿತು ಮಾತುಗಳು ಕೇಳಿಬರುತ್ತಿವೆ.

ಚೆನ್ನೈ: ರಾತ್ರೋ ರಾತ್ರಿ ಸಂಭವಿಸಿದ ಕ್ಷಿಪ್ರ ರಾಜಕೀಯ ಬೆಳವಣಿಗೆಯಿಂದಾಗಿ ತಮಿಳುನಾಡಿನ ರಾಜ್ಯ ರಾಜಕೀಯದಲ್ಲಿ ಅಲ್ಲೋಲ್ಲ ಕಲ್ಲೋಲವಾಗಿದ್ದು, ಹಂಗಾಮಿ ಸಿಎಂ ಪನ್ನೀರ್ ಸೆಲ್ವಂ ಅವರನ್ನು ಪಕ್ಷದ ಖಜಾಂಚಿ ಸ್ಥಾನದಿಂದ  ಕಿತ್ತೊಗೆಯಲಾಗಿದೆ. ಅಲ್ಲದೆ ಪಕ್ಷದಿಂದಲೂ ಉಚ್ಛಾಟನೆ ಮಾಡುವ ಕುರಿತು ಮಾತುಗಳು ಕೇಳಿಬರುತ್ತಿವೆ.

ಇಂದು ಸಂಜೆ ಚೆನ್ನೈನ ಪೋಯಸ್ ಗಾರ್ಡನ್ ನಲ್ಲಿ ನಡೆದ ಬೆಂಬಲಿತ ಶಾಸಕರ ಸಭೆ ಬಳಿಕ ಪನ್ನೀರ್ ಸೆಲ್ವಂ ಅವರನ್ನು ಖಜಾಂಚಿ ಸ್ಥಾನದಿಂದ ಕೈ ಬಿಡಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ವಿಕೆ ಶಶಿಕಲಾ ತಿಳಿಸಿದ್ದಾರೆ.  ಅಂತೆಯೇ ಪಕ್ಷದ ಮುಖಂಡ ಸಿಂಘೈ ಜಿ ರಾಮಚಂದ್ರನ್ ಅವರನ್ನು ಅವರ ಸ್ಥಾನದಿಂದಷ್ಟೇ ಅಲ್ಲದೇ ಪಕ್ಷದಿಂದಲೇ ಉಚ್ಛಾಟಿಸಲಾಗಿದೆ. ಅಲ್ಲದೆ ರಾಮಚಂದ್ರನ್ ಅವರ ಸಹಾಯಕ ಹರಿ ಪ್ರಭಾಕರನ್ ಅವರನ್ನೂ ಕೂಡ  ಉಚ್ಚಾಟಿಸಲಾಗಿದೆ ಎಂದು ಶಶಿಕಲಾ ತಿಳಿಸಿದ್ದಾರೆ.

ಮೂಲಗಳ ಪ್ರಕಾರ ಈ ಇಬ್ಬರೂ ನಾಯಕರು ಪನ್ನೀರ್ ಸೆಲ್ವಂ ಅವರ ಆಪ್ತರಾಗಿದ್ದು, ಈ ಹಿಂದೆ ಬಹಿರಂಗವಾಗಿಯೇ ಪನ್ನೀರ್ ಸೆಲ್ವಂ ಅವರ ಪರವಾಗಿ ಹೇಳಿಕೆ ನೀಡಿದ್ದರು.

ಪನ್ನೀರ್ ಸೆಲ್ವಂ ಉಚ್ಛಾಟನೆ?
ಇದೇ ವೇಳೆ ಶಶಿಕಲಾ ವಿರುದ್ಧ ಬಂಡಾಯವೆದ್ದಿರುವ ಪನ್ನೀರ್ ಸೆಲ್ವಂ ಅವರನ್ನು ಪಕ್ಷದಿಂದಲೇ ಉಚ್ಛಾಟನೆ ಮಾಡುವ ಕುರಿತು ಮಾತುಗಳು ಕೇಳಿಬಂದಿದ್ದು, ಮುಂದಿನ ರಾಜಕೀಯ ಬೆಳವಣಿಗೆಗಳನ್ನು ಆಧರಿಸಿ ಈ ಬಗ್ಗೆ ನಿರ್ಧಾರ  ಕೈಗೊಳ್ಳಲಾಗುತ್ತದೆ ಎಂದು ಎಐಎಡಿಎಂಕೆ ಮೂಲಗಳು ತಿಳಿಸಿವೆ. ಇನ್ನು ಪಕ್ಷದ ಐಟಿ ವಿಂಗ್ ಮುಖ್ಯಸ್ಥ ವಿವಿಆರ್ ರಾಜನ್ ಅವರನ್ನೂ ಕೂಡ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ವಿವಿಆರ್ ರಾಜನ್  ಪನ್ನೀರ್ ಸೆಲ್ವಂ ಬಣದಲ್ಲಿ ಗುರುತಿಸಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!