ತಮಿಳುನಾಡು ರಾಜ್ಯ ಹಂಗಾಮಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ 
ದೇಶ

ಜಯಾ ಸಾವಿನ ತನಿಖೆಗೆ ಆದೇಶಿಸುವೆ: ಪನ್ನೀರ್ ಸೆಲ್ವಂ

ತಮಿಳುನಾಡು ರಾಜಕೀಯದಲ್ಲಿ ಅತಂತ್ರ ಪರಿಸ್ಥಿತಿ ಎದುರಾಗಿದ್ದು, ಶಶಿಕಲಾ ವಿರುದ್ದ ಬಂಡಾಯವೆದ್ದಿದ್ದ ತಮಿಳುನಾಡು ರಾಜ್ಯ ಹಂಗಾಮಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರು...

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಅತಂತ್ರ ಪರಿಸ್ಥಿತಿ ಎದುರಾಗಿದ್ದು, ಶಶಿಕಲಾ ವಿರುದ್ದ ಬಂಡಾಯವೆದ್ದಿದ್ದ ತಮಿಳುನಾಡು ರಾಜ್ಯ ಹಂಗಾಮಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರು ರಾಜೀನಾಮೆ ಹಿಂಪಡೆಯಲು ಸಿದ್ಧನಿದ್ದೇನೆಂದು ಬುಧವಾರ ಹೇಳಿದ್ದಾರೆ.

ಎಐಎಡಿಎಂಕೆ ಪ್ರಧಾನ ಕಚೇರಿಯಲ್ಲಿ ಪಕ್ಷದ ಶಾಸಕರ ಸಭೆ ಪ್ರಗತಿಯಲ್ಲಿರುವಾಗಲೇ ಪತ್ರಿಕಾಗೋಷ್ಟಿಯನ್ನು ನಡೆಸಿ ಪನ್ನೀರ್ ಸೆಲ್ವಂ ಅವರು ಹೇಳಿಕೆ ನೀಡಿದ್ದಾರೆ.

ರಾಜ್ಯದ ಪರಿಸ್ಥಿತಿ ಬಿಗಡಾಯಿಸಿದ್ದೇ ಆದರೆ, ರಾಜೀನಾಮೆ ಹಿಂಪಡೆಯಲು ನಾನು ಸಿದ್ಧನಿದ್ದೇನೆ. 'ಅಮ್ಮ' ಜಯಲಲಿತಾ ಅವರ ಹಾದಿಯಲ್ಲೇ ನಡೆದು ಬಹುಮತ ಸಾಬೀತು ಪಡಿಸುತ್ತೇನೆಂದು ಹೇಳಿದ್ದಾರೆ.

ನಮ್ಮೆಲ್ಲರಿಗೂ ದೇವರಂತೆ ಇದ್ದ ಜಯಲಲಿತಾ "ಅಮ್ಮ'ನ ಸಾವಿನ ಕುರಿತು ತನಿಖೆಗೆ ಆದೇಶಿಸುವೆ. ಜಯಲಲಿತಾ ಅವರ ಸಾವಿನ ಕುರಿತು ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಸಮಿತಿಯನ್ನು ರಚಿಸುತ್ತೇನೆ. ಅಮ್ಮ ಅವರು ತೋರಿಸಿದ್ದ ಹಾದಿಯಲ್ಲೇ ನಡೆಯುತ್ತೇನೆ. ಎಐಎಡಿಎಂಕೆ ಪಕ್ಷದ ವಿರುದ್ದ ಎಲ್ಲಿಯೂ ಮಾತನಾಡಿಲ್ಲ. ಎಂಜಿಆರ್ ಹಾಗೂ ಅಮ್ಮನ ಕನಸಿನಂತೆಯೇ ಪಕ್ಷ ಕಾರ್ಯನಿರ್ವಹಿಸಲಿದೆ.

ಬಲವಂತದಿಂದ ನನ್ನನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿದ್ದಾರೆ. ಪಕ್ಷದ ಸದಸ್ಯರು ರಾಜೀನಾಮೆ ಹಿಂಪಡೆಯುವಂತೆ ಕೇಳಿದರೆ, ರಾಜೀನಾಮೆ ಹಿಂಪಡೆಯಲು ಸಿದ್ಧನಿದ್ದೇನೆ. ಜಯಲಲಿತಾ ಅವರು 16 ವರ್ಷ ಮುಖ್ಯಮಂತ್ರಿಯಾಗಿದ್ದರು. ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ಎಲ್ಲವೂ ಅಮ್ಮನ ಆಶೀರ್ವಾದ. ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವೆ ಎಂದು ತಿಳಿಸಿದ್ದಾರೆ.

ನಾನು ಬಿಜೆಪಿಯ ರಿಮೋಟ್ ಕಂಟ್ರೋಲ್ ಅಲ್ಲ. ಜಯಲಲಿತಾ ಅವರ ಸಂಬಂಧಿ ದೀಪಾ ಅವರ ಬಗ್ಗೆ ನನಗೆ ಗೌರವವಿದೆ. ನಮ್ಮ ಜೊತೆಗೆ ಕೆಲಸ ಮಾಡುವಂತೆ ಈ ಮೂಲಕ ದೀಪಾ ಅವರ ಬಳಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ಶೀಘ್ರದಲ್ಲಿಯೇ ರಾಜ್ಯದ ಜನತೆಯನ್ನು ಭೇಟಿ ಮಾಡಲು ಚಿಂತನೆ ನಡೆಸಲಾಗಿದೆ ಎಂದರು.

ಇದೇ ವೇಳೆ ಪನ್ನೀರ್ ಸೆಲ್ವಂ ಅವರಿಗೆ ತಮಿಳುನಾಡು ಮಾಜಿ ಉಪ ಸ್ಪೀಕರ್ ಪಿ.ಹೆಚ್. ಪಾಂಡಿಯನ್ ಅವರು ಬೆಂಬಲ ವ್ಯಕ್ತಪಡಿಸಿದ್ದು, ಶಶಿಕಲಾ ಕುಟುಂಬ ದುಡ್ಡಿಗೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video