ಬಾಲಿವುಟ್ ನಟಿ ಜಿಯಾ ಖಾನ್ 
ದೇಶ

ಜಿಯಾ ಖಾನ್ ನಿಗೂಢ ಸಾವು ಪ್ರಕರಣ: ಎಸ್ಐಟಿ ತನಿಖೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

ಬಾಲಿವುಟ್ ನಟಿ ಜಿಯಾ ಖಾನ್ ನಿಗೂಢ ಸಾವು ಪ್ರಕರಣವನ್ನು ವಿಶೇಷ ತನಿಖಾ ತಂಡ(ಎಸ್ಐಟಿ)ದಿಂದ ತನಿಖೆ ನಡೆಸಬೇಕೆಂದು ಆಗ್ರಹಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಗುರುವಾರ...

ನವದೆಹಲಿ: ಬಾಲಿವುಟ್ ನಟಿ ಜಿಯಾ ಖಾನ್ ನಿಗೂಢ ಸಾವು ಪ್ರಕರಣವನ್ನು ವಿಶೇಷ ತನಿಖಾ ತಂಡ(ಎಸ್ಐಟಿ)ದಿಂದ ತನಿಖೆ ನಡೆಸಬೇಕೆಂದು ಆಗ್ರಹಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ.

ಜಿಯಾ ಖಾನ್ ಸಾವಿನ ಸುತ್ತಲೂ ಸಾಕಷ್ಟು ಅನುಮಾನಗಳು ಮೂಡಿದ್ದು, ಹೀಗಾಗಿ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವಹಿಸುವಂತೆ ಕೋರಿ ಜಿಯಾ ಖಾನ್ ಅವರ ತಾಯಿ ರುಬಿಯಾ ಖಾನ್ ಅವರು ಫೆಬ್ರವರಿ ತಿಂಗಳಿನಲ್ಲಿ ಅರ್ಜಿಯೊಂದನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿರುವ ನ್ಯಾಯಾಲಯವು ಅರ್ಜಿಯನ್ನು ತಿರಸ್ಕರಿಸಿದೆ ಎಂದು ತಿಳಿದುಬಂದಿದೆ.

2013 ಜೂನ್.3 ರಂದು ನಟಿ ಜಿಯಾ ಖಾನ್, ಜುಹುವಿನಲ್ಲಿರುವ ತಮ್ಮ ಆಪಾರ್ಟ್ ಮೆಂಟ್ ವೊಂದರಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದರು, ಜಿಯಾ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ವ್ಯಕ್ತವಾಗಿದ್ದವು. ಜಿಯಾ ಸಾವಿಗೆ ಆದಿತ್ಯ ಪಂಚೋಲಿಯವರ ಪುತ್ರ ಸೂರಜ್ ಪಂಚೋಲಿಯೇ ಕಾರಣ ಎಂದು ಈ ಹಿಂದೆ ರುಬಿಯಾ ಖಾನ್ ಆವರು ಆರೋಪಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT