ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ 
ದೇಶ

ರೇನ್'ಕೋಟ್ ಹೇಳಿಕೆ; ಪ್ರಧಾನಿ ಮೋದಿ ವಿರುದ್ದ ಓವೈಸಿ ವಾಗ್ದಾಳಿ

ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಕುರಿತಂತೆ 'ರೇನ್ ಕೋಟ್' ಹೇಳಿಕೆ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿಯವರು ಗುರುವಾರ...

ನವದೆಹಲಿ: ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಕುರಿತಂತೆ 'ರೇನ್ ಕೋಟ್' ಹೇಳಿಕೆ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿಯವರು ಗುರುವಾರ ಕಿಡಿಕಾಡಿದ್ದಾರೆ.

ಮೋದಿಯವರ ಹೇಳಿಕೆ ಕುರಿತಂತೆ ಇಂದು ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ರೇನ್'ಕೋಟ್ ಹಾಕಿ ಸ್ನಾನ ಮಾಡುತ್ತಾರೆಂದು ಹೇಳಿಕೆ ನೀಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೊದಲು 'ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ'ದಲ್ಲಿ ತಮ್ಮ ಪಾತ್ರವೇನು ಎಂಬುದರ ಬಗ್ಗೆ ಆಲೋಚನೆ ಮಾಡಬೇಕಿದೆ ಎಂದು ಹೇಳಿದ್ದಾರೆ.

ಸ್ನಾನ ಮನೆಯಲ್ಲಿ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು 'ರೇನ್ ಕೋಟ್' ಧರಿಸಿ ಸ್ನಾನ ಮಾಡುತ್ತಾರೆಂದಾದರೆ, ಗುಜರಾತ್ ರಾಜ್ಯದ ಮುಖ್ಯಮಂತ್ರಿ ಯಾಗಿದ್ದ ಸಂದರ್ಭದಲ್ಲಿ 'ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ' ತಮ್ಮ ಪಾತ್ರವೇನಿತ್ತು ಎಂಬುದನ್ನು ನೆನಪಿಸಿಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

ನೋಟು ನಿಷೇಧ ನಿರ್ಧಾರಕ್ಕೆ ನಿನ್ನೆಯಷ್ಟೇ ಸಮರ್ಥನೆ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾಂಗ್ರೆಸ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದರು. ಮನಮೋಹನ್ ಸಿಂಗ್ ಅವರು ಓರ್ವ ಅಸಾಧಾರಣ ಮನುಷ್ಯ. ಅವರು ಪ್ರಧಾನಿಯಾಗಿದ್ದಾಗ ಸಾವಿರಾರು ಕೋಟಿ ರುಪಾಯಿಗಳ ಭ್ರಷ್ಟಾಚಾರ ನಡೆಸಿದರೂ ಅವರ ವಿರುದ್ಧ ಯಾವುದೇ ಕಪ್ಪು ಚುಕ್ಕೆ ಇಲ್ಲ. ಇದು ನಿಜಕ್ಕೂ ಅಚ್ಚರಿಯ ವಿಷಯ. ಅವರಿಗೆ ರೇನ್ ಕೋಟ್ ಹಾಕಿ ಸ್ನಾನ ಮಾಡೋದು ಗೊತ್ತು ಎಂದು ವ್ಯಂಗ್ಯವಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

SCROLL FOR NEXT