ನರೇಂದ್ರ ಮೋದಿ 
ದೇಶ

ಉತ್ತರ ಪ್ರದೇಶ, ದೇಶ ಲೂಟಿ ಮಾಡಿದ ಎರಡು ಕುಟುಂಬಗಳ ಬಗ್ಗೆ ಎಚ್ಚರದಿಂದಿರಿ: ಮೋದಿ

ಕುಟುಂಬ ರಾಜಕೀಯ ಮತ್ತು ಕಾನೂನು ಸುವ್ಯವಸ್ಥೆ ಗುರಿಯಾಗಿಸಿಕೊಂಡು ಸಮಾಜವಾದಿ ಪಾರ್ಟಿ ಹಾಗೂ ಕಾಂಗ್ರೆಸ್ ಮೈತ್ರಿ ವಿರುದ್ಧ...

ಬಿಜ್ನೋರ್‌: ಕುಟುಂಬ ರಾಜಕೀಯ ಮತ್ತು ಕಾನೂನು ಸುವ್ಯವಸ್ಥೆ ಗುರಿಯಾಗಿಸಿಕೊಂಡು ಸಮಾಜವಾದಿ ಪಾರ್ಟಿ ಹಾಗೂ ಕಾಂಗ್ರೆಸ್ ಮೈತ್ರಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೊದಿ ಅವರು, ಎರಡು ಕುಟುಂಬಗಳು ಉತ್ತರ ಪ್ರದೇಶ ಮತ್ತು ದೇಶವನ್ನು ಲೂಟಿ ಮಾಡಿದ್ದು, ಈ ಬಗ್ಗೆ ಜನರು ಎಚ್ಚರದಿಂದಿರಬೇಕು ಎಂದು ಶುಕ್ರವಾರ ಹೇಳಿದ್ದಾರೆ.
ಇಂದು ಬಿಜ್ನೋರ್ ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಮೋದಿ, ಎರಡು ಕುಟುಂಬಗಳು ಪ್ರತ್ಯೇಕ ಸಂದರ್ಭಗಳಲ್ಲಿ ದೇಶ ಮತ್ತು ಉತ್ತರ ಪ್ರದೇಶವನ್ನು ನಾಶ ಮಾಡಿವೆ. ಒಬ್ಬರು ಉತ್ತರ ಪ್ರದೇಶವನ್ನು ನಾಶ ಮಾಡಿದರೆ, ಮತ್ತೊಬ್ಬರು ದೇಶವನ್ನು ನಾಶ ಮಾಡಿದರು. ಈಗ ಆ ಎರಡೂ ಕೈಗಳು ಸೇರಿದರೆ ಏನಾಗುತ್ತದೆ ಎಂದು ಯೋಚಿಸಿ ಎಂದು ಮತದಾರರ ಮುಂದೆ ಪ್ರಶ್ನೆಯನ್ನಿಟ್ಟರು. ಅಲ್ಲದೆ ಕಾಂಗ್ರೆಸ್‌ನ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಬಾಲಿಷ ವರ್ತನೆ ಕುರಿತು ಹಲವು ನಗೆ ಚಟಾಕಿಗಳನ್ನೂ ಹರಿಯಬಿಟ್ಟರು.
ಸರ್ಕಾರದ ದುರಾಡಳಿತದಿಂದ ಜನ ತತ್ತರಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಮಾಡಿದ ಸಾಲ ತೀರಿಸಲಾಗದೆ ರೈತರು ಆತ್ಮಹತ್ಯೆ ದಾರಿ ಹಿಡಿಯುವ ಸ್ಥಿತಿ ನಿರ್ಮಾಣವಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಿಜೆಪಿಯನ್ನು ಅಧಿಕಾರಕ್ಕೆ ತಂದರೆ ನಮ್ಮ ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸಲಿದೆ. ಕಬ್ಬು ಬೆಳೆಗಾರರ ಬಾಕಿ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು. ಸಣ್ಣ ಮತ್ತು ಅತಿ ಸಣ್ಣ ರೈತರ ಹಿತ ಕಾಯಲು ಸಾಲಾ ಮನ್ನಾ ಮಾಡಲಾಗುವುದು ಎಂದು ಮೋದಿ ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!