ಚೆನ್ನೈ: ತಮಿಳುನಾಡು ಮುಖ್ಯಮಂತ್ರಿಯಾಗಲು ಕಸರತ್ತು ನಡೆಸುತ್ತಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ವಿರುದ್ಧ ಬಂಡಾಯ ಸಾರಿರುವ ಒ.ಪನ್ನೀರ್ ಸೆಲ್ವಂ ಗೆ ಡಿಎಂಕೆ ಬೇಷರತ್ ಬೆಂಬಲ ನೀಡುವುದಿಲ್ಲ ಎಂದು ಡಿಎಂಕೆ ಕಾರ್ಯಾಧ್ಯಕ್ಷ ಎಂಕೆ ಸ್ಟ್ಯಾಲಿನ್ ಸ್ಪಷ್ಟಪಡಿಸಿದ್ದಾರೆ.
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪನ್ನೀರ್ ಸೆಲ್ವಂ ರಾಜೀನಾಮೆ ಹಿಂಪಡೆದು, ಮತ್ತೆ ಸರ್ಕಾರ ರಚಿಸಲು ಕಸರತ್ತು ಮಾಡುತ್ತಿದ್ದರೆ, ಶಶಿಕಲಾ ಸರ್ಕಾರ ರಚಿಸಲು ಹಕ್ಕು ಪ್ರತಿಪಾದನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿ, ಪಕ್ಷದಿಂದ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಸ್ಟ್ಯಾಲಿನ್ ಪನ್ನೀರ್ ಸೆಲ್ವಂ ಗೆ ಬೆಂಬಲ ನೀಡುವ ವಿಚಾರವಾಗಿ ಡಿಎಂಕೆ ಅಧ್ಯಕ್ಷ ಎಂ. ಕರುಣಾನಿಧಿ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಅನ್ಬಳಗನ್ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಇದೇ ವೇಳೆ ವೈಯಕ್ತಿಕ ಅಭಿಪ್ರಾಯಗಳನ್ನು ತಿಳಿಸದಂತೆ ಪಕ್ಷದ ಪದಾಧಿಕಾರಿಗಳಿಗೆ ಸ್ಟ್ಯಾಲಿನ್ ತಿಳಿಸಿದ್ದಾರೆ.