ದೇಶ

ಹೆಚ್-1 ಬಿ ವೀಸಾ ವಿಷಯವಾಗಿ ಅಮೆರಿಕದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ: ಕೇಂದ್ರ ಸರ್ಕಾರ

Srinivas Rao BV
ನವದೆಹಲಿ: ಭಾರತೀಯ ಐಟಿ ಕ್ಷೇತ್ರದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿರುವ ಹೆಚ್-1 ಬಿ ವೀಸಾ ಹೊಸ ನೀತಿಗಳ ಬಗ್ಗೆ ಅಮೆರಿಕ ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ. 
ಡೊನಾಲ್ಡ್ ಟ್ರಂಪ್ ಆಡಳಿತ ಹೆಚ್-1 ಬಿ ವೀಸಾ ನೀತಿಗಳಲ್ಲಿ ಬದಲಾವಣೆ ಎಂದಿರುವುದು ಭಾರತೀಯ ಐಟಿ ಕ್ಷೇತ್ರದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ. ಈ ಆತಂಕದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಮೆರಿಕಾ ಸರ್ಕಾರ ಹಾಗೂ ಕಾಂಗ್ರೆಸ್ ನ ಸದಸ್ಯರೊಂದಿಗೆ ಮಾತುಕತೆ ನಡೆಸುತ್ತಿದೆ. 
ಹೆಚ್-1 ಬಿ ವೀಸಾ ಮಾತ್ರವಲ್ಲದೇ ಭಾರತದ ಮೇಲೆ ಪರಿಣಾಮ ಬೀರಲಿರುವ ಡೊನಾಲ್ಡ್ ಟ್ರಂಪ್ ಆಡಳಿತ ಹೊರಡಿಸಿರುವ ಹಲವು ಆದೇಶಗಳ ಬಗ್ಗೆಯೂ ಚರ್ಚೆ ನಡೆಸುತ್ತಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಡೊನಾಲ್ಡ್ ಟ್ರಂಪ್ ಆಡಳಿತ ಹೊರಡಿಸುತ್ತಿರುವ ಆದೇಶದಿಂದ ಮುಂದಿನ ಪರಿಣಾಮಗಳ ಬಗ್ಗೆ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್ ಹೇಳಿದ್ದಾರೆ. 
SCROLL FOR NEXT