ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಧ್ಯಪ್ರದೇಶ ಎಟಿಎಸ್ ಮುಖ್ಯಸ್ಥ ಸಂಜೀವ್ ಶಮಿ 
ದೇಶ

ಮಧ್ಯಪ್ರದೇಶ ಎಟಿಎಸ್ ನಿಂದ ಪಾಕಿಸ್ತಾನದ ಬೇಹುಗಾರಿಕ ಜಾಲ ಪತ್ತೆ: 11 ಬಂಧನ

ಮಧ್ಯಪ್ರದೇಶದ ಭಯೋತ್ಪಾದನಾ ನಿಗ್ರಹ ದಳ ಪಾಕಿಸ್ತಾನದ ಪರ ಭಾರತದಲ್ಲಿ ಬೇಹುಗಾರಿಗೆ ನಡೆಸುತ್ತಿದ್ದ ಜಾಲವನ್ನು ಪತ್ತೆ ಮಾಡಿದ್ದು 11 ಜನರನ್ನು ಬಂಧಿಸಿದೆ.

ಭೋಪಾಲ್: ಮಧ್ಯಪ್ರದೇಶದ ಭಯೋತ್ಪಾದನಾ ನಿಗ್ರಹ ದಳ ಪಾಕಿಸ್ತಾನದ ಪರ ಭಾರತದಲ್ಲಿ ಬೇಹುಗಾರಿಗೆ ನಡೆಸುತ್ತಿದ್ದ ಜಾಲವನ್ನು ಪತ್ತೆ ಮಾಡಿದ್ದು 11 ಜನರನ್ನು ಬಂಧಿಸಿದೆ. ಬಂಧಿತರಿಂದ ಚೀನಾದ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ. 
ಭಾರತೀಯ ಸೇನಾ ಕಾರ್ಯಾಚರಣೆಗಳ ಬಗ್ಗೆ ಬೇಹುಗಾರಿಕೆ ನಡೆಸಲು ನಿಯೋಜಿಸಲಾಗಿದ್ದ ತಂಡ ಚೀನಾ ಉಪಕರಣಗಳು ಹಾಗೂ ಸಿಮ್ ಕಾರ್ಡ್ ಗಳ ಸಹಾಯದಿಂದ ಬೇಹುಗಾರಿಕೆ ನಡೆಸುತ್ತಿದ್ದರು ಎಂದು ಎಟಿಎಸ್ ಅಧಿಕಾರಿಗಳು ತಿಳಿಸಿದ್ದಾರೆ. 
ರಾಜ್ಯದ ವಿವಿಧ ಭಾಗಗಳಲ್ಲಿ ಬೇಹುಗಾರಿಕಾ ಜಾಲದಲ್ಲಿ ಸಕ್ರಿಯರಾಗಿದ್ದ ಪಾಕಿಸ್ತಾನ ಗುಪ್ತಚರ ಇಲಾಖೆ ಐಎಸ್ಐ ಬೆಂಬಲಿತ 11 ಜನರನ್ನು ಬಂಧಿಸಲಾಗಿದೆ. ಬಂಧಿತರು ಚೀನಾದ್ ಉಪಕರಣ ಹಾಗೂ ಸಿಮ್-ಬಾಕ್ಸ್ ಗಳನ್ನು ಬಳಸಿಕೊಂಡು ಪರ್ಯಾಯ ದೂರವಾಣಿ ಎಕ್ಸ್ ಚೇಂಜ್ ಗಳ ಮೂಲಕ ಕಾರ್ಯನಿರ್ವಹಿಸುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದು, ಸಿಮ್ ಬಾಕ್ಸ್, ಮೊಬೈಲ್ ಫೋನ್, ಲ್ಯಾಪ್ ಟಾಪ್, ಡಾಟಾ ಕಾರ್ಡ್, ಪ್ರೀಪೇಯ್ಡ್ ಸಿಮ್ ಕಾರ್ಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. 
ಮೂವರನ್ನು ಭೋಪಾಲ್ ನಲ್ಲಿ ಬಂಧಿಸಲಾಗಿದ್ದು, ಸತ್ನಾದಲ್ಲಿ ಓರ್ವನನ್ನು, ಜಬಲ್ ಪುರದಲ್ಲಿ ಇಬ್ಬರು ಹಾಗೂ ಐವರನ್ನು ಗ್ವಾಲಿಯರ್ ನಲ್ಲಿ ಬಂಧಿಸಲಾಗಿದ್ದು, ಬಂಧಿತರ ವಿರುದ್ಧ ಐಪಿಎಸಿ ಸೆಕ್ಷನ್ 122 ಹಾಗೂ 123 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ