ಲಖನೌ: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮೊದಲ ಹಂತದ ಚುನಾವಣೆಯಲ್ಲಿ ಬಿಎಸ್ ಪಿ-ಬಿಎಸ್ ಪಿ ಬೆಂಬಲಿಗರ ನಡುವೆ ಘರ್ಷಣೆ ಉಂಟಾಗಿದೆ.
ಮತದಾನಕ್ಕೆ ಸಂಬಂಧಿಸಿದಂತೆ ಎಸ್ ಪಿ-ಬಿಎಸ್ ಪಿ ಬೆಂಬಲಿಗರ ನಡುವೆ ಘರ್ಷಣೆ ಉಂಟಾಗಿದ್ದರೆ, ಪಶ್ಚಿಮ ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಗುಂಡಿನ ದಾಳಿ ನಡೆದಿರುವ ಬಗ್ಗೆಯೂ ವರದಿಗಳಾಗಿವೆ. ಮತಗಟ್ಟೆಯಲ್ಲಿ ಉಂಟಾದ ಘರ್ಷಣೆಯಿಂದ ಓರ್ವ ವ್ಯಕ್ತಿಗೆ ಗಾಯಗಳುಂಟಾಗಿದೆ.
ಘರ್ಷಣೆ ಉಂಟಾದ ತಕ್ಷಣೆವೇ ಪೊಲೀಸ್ ಸಿಬ್ಬಂದಿಗಳು ಎಚ್ಚೆತ್ತುಕೊಂಡಿದ್ದು, ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ ಶಾಂತಿಯುತ ಮತದಾನ ನಡೆಯುತ್ತಿದೆ.