ಮುಂಬೈ: ಮುಂಬೈನಲ್ಲಿರುವ ಟಾಟಾ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಶನಿವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ.
ವರದಿಗಳ ಪ್ರಕಾರ, ಆಸ್ಪತ್ರೆಯ ನೆಲಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ತಕ್ಷಣಕ್ಕೆ ಆಸ್ತಿ ಹಾನಿ ಅಥವಾ ಪ್ರಾಣ ಹಾನಿ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಸ್ಥಳಕ್ಕೆ ನಾಲ್ಕು ಅಗ್ನಿ ಶಾಮಕ ವಾಹನ ಹಾಗೂ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಿಯಂತ್ರಿಸಲು ಯತ್ನಿಸುತ್ತಿದ್ದಾರೆ.