ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆಯುವ ವಿಶ್ವಾಸ ವ್ಯಕ್ತಪಡಿಸಿದ ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ)ದ ಮುಖ್ಯಸ್ಥೆ ಮಾಯಾವತಿ ಅವರು, ರಾಜ್ಯದ ಜನತೆಗೆ ಕಾಂಗ್ರೆಸ್, ಎಸ್ಪಿ ಹಾಗೂ ಬಿಜೆಪಿಯ ನಿಜವಾದ ಮುಖ ಏನೂ ಅಂತ ಗೊತ್ತು ಎಂದು ಶನಿವಾರ ಹೇಳಿದ್ದಾರೆ.
ಕೇವಲ ಬಿಎಸ್ಪಿಯಿಂದ ಮಾತ್ರ ಉತ್ತರ ಪ್ರದೇಶದಲ್ಲಿ ಆದರ್ಶ ಆಡಳಿತ ನೀಡಲು ಸಾಧ್ಯ. ಆದರೆ ಕಾಂಗ್ರೆಸ್-ಎಸ್ಪಿ ಮೈತ್ರಿ ಮತ್ತು ಬಿಜೆಪಿ ರಾಜ್ಯದ ಜನತೆಗೆ ತಪ್ಪು ಮಾಹಿತಿ ನೀಡಲು ಯತ್ನಿಸುತ್ತಿದ್ದಾರೆ ಎಂದು ಮಾಯಾವತಿ ಆರೋಪಿಸಿದ್ದಾರೆ.
ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಯಾವತಿ, ಕೇಂದ್ರ ಸರ್ಕಾರ ಕಳೆದ ಲೋಕಸಭೆ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದರು.
ಕಳೆದ ಎರಡೂವರೆ ವರ್ಷಗಳಿಂದ ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿದೆ. ಆದರೆ ಇದುವರೆಗೂ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics