ಕುಲ್ಗಾಮ್(ಜಮ್ಮು ಮತ್ತು ಕಾಶ್ಮೀರ): ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ ನಾಲ್ವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದ್ದು, ಕಾರ್ಯಾಚರಣೆ ವೇಳೆ ಮೂವರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಯರಿಪೋರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿದ ಭಾರತೀಯ ಸೇನೆ ನಾಲ್ವರು ಯೋಧರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದೆ. ಇನ್ನು ಗುಂಡಿನ ಕಾಳಗದಲ್ಲಿ ಮೂವರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.
ಗುಂಡಿನ ಕಾಳಗದ ವೇಳೆ ಇನ್ನು ಮೂವರು ಯೋಧರಿಗೆ ಗಂಭೀರವಾಗಿ ಗಾಯಗೊಂಡಿದ್ದು ಉಗ್ರರು ಸ್ಥಳದಿಂದ ಪರಾರಿಯಾಗಿದ್ದಾರೆ. ಉಗ್ರರ ಪತ್ತೆಗೆ ಬಿಎಸ್ಎಫ್ ಯೋಧರು ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಕಾರ್ಯಾಚರಣೆ ಬಳಿಕ ಯೋಧರು ಉಗ್ರರ ಬಳಿಯಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಭಾರತೀಯ ಸೇನೆ ವಶಪಡಿಸಿಕೊಂಡಿದೆ.