ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಉತ್ತರಾಖಂಡ್ ನಲ್ಲಿ ರಾಹುಲ್ ಗಾಂಧಿ ಸಮಾವೇಶ

ಉತ್ತರಾಖಂಡ್ ವಿಧಾನಸಭಾ ಚುನಾವಣೆಗೆ ಸಿದ್ಧಗೊಳ್ಳುತ್ತಿದ್ದು, ರಾಹುಲ್ ಗಾಂಧಿ ಫೆ.12 ರಂದು ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ರಾಹುಲ್ ಗಾಂಧಿ
Srinivas Rao BV
Updated On : 12 Feb 2017, 12:09 pm
ಹರಿದ್ವಾರ್: ಉತ್ತರಾಖಂಡ್ ವಿಧಾನಸಭಾ ಚುನಾವಣೆಗೆ ಸಿದ್ಧಗೊಳ್ಳುತ್ತಿದ್ದು, ರಾಹುಲ್ ಗಾಂಧಿ ಫೆ.12 ರಂದು ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. 
ನುಕ್ಕಡ್ ಸಭಾದೊಂದಿಗೆ ರಾಹುಲ್ ಗಾಂಧಿ ರ್ಯಾಲಿ ನಡೆಸಲಿದ್ದಾರೆ. ಇದಕ್ಕೂ ಮುನ್ನ ಉತ್ತರ ಪ್ರದೇಶದಲ್ಲಿ ಮಾತನಾಡಿದ್ದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಚುನಾವಣೆಗೂ ಮುನ್ನ ಕಪ್ಪುಹಣ ವಾಪಸ್ ತರುವುದಾಗಿ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಈ ವರೆಗೂ ಸ್ವಿಸ್ ಬ್ಯಾಂಕ್ ನಿಂದ ಕಪ್ಪುಹಣ ವಾಪಸ್ ತರುವುದರ  ಬಗ್ಗೆ ಯಾವುದೇ ಕ್ರಮ ಘೋಷಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. 
ಸ್ವಿಸ್ ಬ್ಯಾಂಕ್ ನಲ್ಲಿ ಅಕ್ರಮ ಹಣ ಇಟ್ಟಿರುವವರ ಹೆಸರುಗಳನ್ನು ಲೋಕಸಭೆ, ರಾಜ್ಯಸಭೆಯಲ್ಲಿ ಏಕೆ ಬಹಿರಂಗಗೊಳಿಸುತ್ತಿಲ್ಲ ಎಂದು ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದರು. ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ನಂತರ ಫೆ.12 ರಂದು ಉತ್ತರಾಖಂಡ್ ನಲ್ಲಿ ನಡೆಯಲಿರುವ ರಾಹುಲ್ ಗಾಂಧಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಫೆ.15 ರಂದು ಉತ್ತರಾಖಂಡ್ ನಲ್ಲಿ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement