ನವದೆಹಲಿ: ಹಗರಣಗಳನ್ನು ಮುಂದಿಟ್ಟುಕೊಂಡು ಭಾನುವಾರ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ದೇವ ಭೂಮಿ ಉತ್ತರಾಖಂಡ್ ವನ್ನು ಕಾಂಗ್ರೆಸ್ ಲೂಟಿ ಭೂಮಿಯಾಗಿ ಪರಿವರ್ತಿಸಿದೆ ಎಂದು ಆರೋಪಿಸಿದ್ದಾರೆ
ಉತ್ತರಾಖಂಡ್ ದ ಶ್ರೀನಗರದಲ್ಲಿ ಇಂದು ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಇದುವರೆಗೆ ಅಧಿಕಾರಕ್ಕೆ ಬಂದ ಪ್ರತಿಯೊಬ್ಬರು ರಾಜ್ಯವನ್ನು ಲೂಟಿ ಮಾಡುವ ಮೂಲಕ ದೇವ ಭೂಮಿಯನ್ನು ಲೂಟ್ ಭೂಮಿಯಾಗಿ ಮಾಡಿಕೊಂಡಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಉತ್ತರಾಖಂಡ್ ಮುಖ್ಯಮಂತ್ರಿ ಹರಿಶ್ ರಾವತ್ ವಿರುದ್ಧದ ರಹಸ್ಯ ಕಾರ್ಯಾಚರಣೆಯನ್ನು ಪ್ರಸ್ತಾಪಿಸಿದ ಮೋದಿ, ವಿಧಾಸಭೆಯಲ್ಲಿ ತಮಗೆ ಬೆಂಬಲ ನೀಡುವಂತೆ ಪಕ್ಷದ ಶಾಸಕರಿಗೆ ಲಂಚದ ಆಮಿಷ ನೀಡುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಇಂತಹ ವಕ್ತಿಗಳು ಯಾವತ್ತೂ ಜನರ ಬಗ್ಗೆ ಯೋಜನೆ ಮಾಡಲ್ಲ. ಹೀಗಾಗಿ ರಾಜ್ಯದ ಭವಿಷ್ಯಕ್ಕಾಗಿ ಬಿಜೆಪಿಗೆ ಮತ ನೀಡಿ ಎಂದು ಮನವಿ ಮಾಡಿದರು.
ಈ ಬಾರಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಮೂಲಕ ಕಾಂಗ್ರೆಸ್ ಗೆ ಪಾಠ ಕಲಿಸಿ. ಮುಂದಿನ ಐದು ವರ್ಷಗಳಲ್ಲಿ ಉತ್ತರಾಖಂಡ್ ವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುತ್ತೇವೆ ಎಂದರು