ಬಾಲಕನಿಗೆ ಡಿಕ್ಕಿ ಹೊಡೆದ ಕ್ಯಾಬ್: ಗಾಯಾಳು ಹಾಗೂ ತಾಯಿಯೊಂದಿಗೆ 5 ಗಂಟೆ ಸುತ್ತಾಡಿದ ಚಾಲಕ
ನಾಲ್ಕು ವರ್ಷದ ಬಾಲಕನಿಗೆ ಡಿಕ್ಕಿ ಹೊಡೆದ ಕ್ಯಾಬ್ ಚಾಲಕ, ಬಾಲಕನ ತಾಯಿಯನ್ನು ಕಾರಿನಲ್ಲಿ ಕೂರಿಸಿಕೊಂಡು ಸುಮಾರು ಐದು ಗಂಟೆಗಳ ಕಾಲ ಕಾರಿನಲ್ಲಿ ...
ನವದೆಹಲಿ: ನಾಲ್ಕು ವರ್ಷದ ಬಾಲಕನಿಗೆ ಡಿಕ್ಕಿ ಹೊಡೆದ ಕ್ಯಾಬ್ ಚಾಲಕ, ಬಾಲಕನ ತಾಯಿಯನ್ನು ಕಾರಿನಲ್ಲಿ ಕೂರಿಸಿಕೊಂಡು ಸುಮಾರು ಐದು ಗಂಟೆಗಳ ಕಾಲ ಕಾರಿನಲ್ಲಿ ಸುತ್ತಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ದೆಹಲಿಯ ಮುಖರ್ಜಿ ನಗರ ಪ್ರದೇಶದಲ್ಲಿ ಆಟವಾಡುತ್ತಿದ್ದ ರೋಹಿತ್ ಎಂಬ ನಾಲ್ಕು ವರ್ಷದ ಬಾಲಕನಿಗೆ ಕಾರು ರಿವರ್ಸ್ ತೆಗೆಯುವಾಗ ಡ್ರೈವರ್ ರಾಹುಲ್ ಡಿಕ್ಕಿ ಹೊಡೆದಿದ್ದಾನೆ. ಕೂಡಲೇ ಸ್ಥಳೀಯರೆಲ್ಲ ಬಂದು ಗಲಾಟೆ ಮಾಡಿದ್ದಾರೆ. ಈ ವೇಳೆ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುವುದಾಗಿ ಹೇಳಿ ಬಾಲಕ ಮತ್ತು ಆತನ ತಾಯಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಾನೆ.
ಸ್ಥಳೀಯ ಆಸ್ಪತ್ರೆಯಲ್ಲಿ ರೋಹಿತ್ ಗೆ ಚಿಕಿತ್ಸೆ ಕೊಡಿಸುವ ಬದಲು ಸುಮಾರು 5 ತಾಸುಗಳ ಕಾಲ ಬಾಲಕ ಮತ್ತು ಆತನ ತಾಯಿಯನ್ನು ಕಾರಿನಲ್ಲಿ ಕೂರಿಸಿಕೊಂಡು ಸುತ್ತಾಡಿದ್ದಾನೆ. ಪೊಲೀಸರಿಗೆ ದೂರು ನೀಡದಂತೆ ಈ ವೇಳೆ ಬೆದರಿಕೆ ಹಾಕಿದ್ದಾನೆ.
ರಾಹುಲ್, ಬಾಲಕ ರೋಹಿತ್ ಕರೆದುಕೊಂಡು ಆಸ್ಪತ್ರೆಯೊಂದಕ್ಕೆ ತೆರಳಿದ್ದಾನೆ, ಆದರೆ ಅಲ್ಲಿ ದಾಖಲಿಸಿಕೊಳ್ಳಲು ಆಸ್ಪತ್ರೆ ಸಿಬ್ಬಂದಿ ನಿರಾಕರಿಸಿದ್ದಾರೆ. ಮತ್ತೆ ಬೇರೊಂದು ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಒಂದರಿಂದ ಮತ್ತೊಂದು ಆಸ್ಪತ್ರೆಗೆ ಕರೆದೊಯ್ದು ಸುಮಾರು 5 ಗಂಟೆ ಸಮಯ ವ್ಯರ್ಥ ಮಾಡಿದ ಎಂದು ಬಾಲಕನ ತಾಯಿ ವಸಂತ ಕುಮಾರಿ ಹೇಳಿದ್ದಾರೆ.
ರೋಹಿತ್ ಸಾವನ್ನಪ್ಪಿದ ಅರ್ಧ ಗಂಟೆ ನಂತರ ವಸಂತಿ ಕುಮಾರಿ ತನ್ನ ಗಂಡನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ನಂತರ ಆಕೆಯ ಪತಿ ರೋಹಿತ್ ನನ್ನು ಆಸ್ಪತ್ರೆಗೆ ಕರೆದೊಯ್ದಾಗ ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಕಾರಿನಲ್ಲಿ ಕೂರಿಸಿಕೊಂಡಿದ್ದ ರಾಹುಲ್ ಕಾರಿಗೆ ಲಾಕ್ ಮಾಡಿ ರೋಹಿತ್ ನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ, ಪೊಲೀಸರಿಗೆ ದೂರು ನೀಡಿದರೇ ಕಾರಿಗೆ ಬೆಂಕಿ ಹಚ್ಚುವುದಾಗಿ ಬೆದರಿಸುತ್ತಿದ್ದ ಎಂದು ವಸಂತಿ ಕುಮಾರಿ ಪೊಲೀಸರಿಗೆ ದೂರು ನೀಡಿದ್ದಾರೆ, ರೋಹಿತ್ ತಾಯಿ ದೂರಿನ ಅನ್ವಯ ರಾಹುಲ್ ನನ್ನು ಪೊಲೀಸರು ಬಂಧಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.