ಬಿಜೆಪಿ ಹಿರಿಯ ನಾಯಕರ ಸುಬ್ರಮಣಿಯನ್ ಸ್ವಾಮಿ 
ದೇಶ

ಶಶಿಕಲಾಗೆ ಬಹುಮತವಿದೆ, ರಾಜ್ಯಪಾಲರೇಕೆ ತಡ ಮಾಡುತ್ತಿದ್ದಾರೆ: ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿರುವ ವಿ.ಕೆ. ಶಶಿಕಲಾ ಅವರು ಬಹುಮತವನ್ನು ಪಡೆದಿದ್ದು, ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರು ಯಾವುದಕ್ಕೆ ಕಾಯುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕರ ಸುಬ್ರಮಣಿಯನ್ ಸ್ವಾಮಿ...

ನವದೆಹಲಿ: ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿರುವ ವಿ.ಕೆ. ಶಶಿಕಲಾ ಅವರು ಬಹುಮತವನ್ನು ಪಡೆದಿದ್ದು, ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರು ಯಾವುದಕ್ಕೆ ಕಾಯುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕರ ಸುಬ್ರಮಣಿಯನ್ ಸ್ವಾಮಿ ಅವರು ಸೋಮವಾರ ಪ್ರಶ್ನಿಸಿದ್ದಾರೆ.

ತಮಿಳುನಾಡು ರಾಜಕೀಯ ಬಿಕ್ಕಟ್ಟು ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಶಶಿಕಲಾ ಅವರು ತಮಗಿರುವ ಬೆಂಬಲ ಕುರಿತಂತೆ ಶಾಸಕರು ಸಹಿ ಮಾಡಿರುವ ಪಟ್ಟಿಯನ್ನು ಈಗಾಗಲೇ ರಾಜ್ಯಪಾಲರಿಗೆ ನೀಡಿದ್ದಾರೆ. ಆದರೆ, ಪವನ್ನೀರ್ ಸೆಲ್ವಂ ಅವರು ಯಾವುದೇ ರೀತಿಯ ಪಟ್ಟಿಯನ್ನೂ ನೀಡಿಲ್ಲ. ಪಟ್ಟಿಯನ್ನು ಗಮನಿಸುವುದಾದರೆ ಶಶಿಕಲಾ ಅವರು ಬಹುಮತವನ್ನು ಪಡೆದಿದ್ದಾರೆ. ಪಟ್ಟಿ ಸಲ್ಲಿಕೆ ಮಾಡಿದ್ದರೂ, ರಾಜ್ಯಪಾಲರು ಯಾವುದಕ್ಕೆ ಕಾಯುತ್ತಿದ್ದಾರೆ? ಎಂದು ಹೇಳಿದ್ದಾರೆ.

ಅಧಿಕಾರದ ಕೆಸರೆರಚಾಟ ನನಗೆ ಅರ್ಥವಾಗುತ್ತಿಲ್ಲ. ಎಲ್ಲವೂ ಸ್ಪಷ್ಟವಾಗಿದ್ದರೂ ರಾಜ್ಯಪಾಲರು ತಮ್ಮ ನಿರ್ಧಾರ ಪ್ರಕಟಿಸಲು ತಡ ಮಾಡುತ್ತಿದ್ದಾರೆ. ಶಶಿಕಲಾ ಅವರಿಗೆ 139 ಶಾಸಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಬಹುಮತ ಪಡೆದಿರುವುದು ಇದರಿಂದ ಸಾಬೀತಾಗುತ್ತದೆ. ಪಟ್ಟಿಯಲ್ಲಿ ಶಾಸಕರು ಸಹಿ ಮಾಡಿದ್ದಾರೆ. ಶಾಸಕರೊಂದಿಗೆಯೇ ಶಶಿಕಲಾ ಅವರು ಪಟ್ಟಿಯನ್ನು ಸಲ್ಲಿಕೆ ಮಾಡಿದ್ದಾರೆ. ಪನ್ನೀರ್ ಸೆಲ್ವಂ ಅವರು ಒಂದು ಪಟ್ಟಿಯನ್ನೂ ಕೂಡ ಸಲ್ಲಿಕೆ ಮಾಡಿಲ್ಲ. ಶಶಿಕಲಾಗೆ ಸ್ಪಷ್ಟ ಬಹುಮತವಿದ್ದರೂ ರಾಜ್ಯಪಾಲರೇಕೆ ತಡ ಮಾಡುತ್ತಿದ್ದಾರೆಂಬುದು ನನಗೆ ಅರ್ಥವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್