ಶ್ರೀನಗರ: ಉತ್ತರ ಕಾಶ್ಮೀರದ ಬಂಡಿಪೋರ ಜಿಲ್ಲೆಯಲ್ಲಿ ಭಾರತೀಯ ಭದ್ರತಾ ಪಡೆ ಎನ್ ಕೌಂಟರ್ ನಡೆಸುತ್ತಿದ್ದು, ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.
ಬಂಡಿಪೋರದ ಹಜಿನ್ ಪ್ರದೇಶದಲ್ಲಿರುವ ಪರ್ರೆ ಮೊಹಲ್ಲಾದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಕೂಡಲೇ ಸ್ಥಳದಲ್ಲಿ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಲು ಮುಂದಾಗಿತ್ತು. ಈ ವೇಳೆ ಉಗ್ರರು ಸೇನೆ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಇಬ್ಬರು ಯೋಧರಿಗೆ ಗಾಯವಾಗಿರುವುದಾಗಿ ತಿಳಿದುಬಂದಿದೆ.
ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆಯನ್ನು ಮುಂದುವರೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.