ಪನ್ನೀರ್ ಸೆಲ್ವಂ 
ದೇಶ

ಎಲ್ಲವನ್ನೂ ಕ್ಷಮಿಸಿದ್ದೇವೆ, ಉತ್ತಮ ಆಡಳಿತಕ್ಕಾಗಿ ಕೈ ಜೋಡಿಸಿ: ಶಶಿಕಲಾ ಬಣಕ್ಕೆ ಪನ್ನೀರ್ ಸೆಲ್ವಂ ಆಹ್ವಾನ

ನಿಮ್ಮ ಎಲ್ಲ ತಪ್ಪುಗಳನ್ನು ಕ್ಷಮಿಸಿದ್ದೇವೆ.. ಉತ್ತಮ ಆಡಳಿತಕ್ಕಾಗಿ ನಮ್ಮೊಂದಿಗೆ ಕೈ ಜೋಡಿಸಿ ಎಂದು ಹಂಗಾಮಿ ಸಿಎಂ ಪನ್ನೀರ್ ಸೆಲ್ವಂ ಶಶಿಕಲಾ ಬಣದ ಶಾಸಕರಿಗೆ ಬಹಿರಂಗ ಆಹ್ವಾನ ನೀಡಿದ್ದಾರೆ.

ಚೆನ್ನೈ: ಜಯಲಲಿತಾ ಆತ್ಮ ನಮಗೆ ಮಾರ್ಗದರ್ಶನ ನೀಡುತ್ತದೆ.. ಅದರಂತೆ ರಾಜ್ಯದಲ್ಲಿ ಆಡಳಿತ ಮುಂದುವರಿಸುತ್ತೇನೆ..ನಿಮ್ಮ ಎಲ್ಲ ತಪ್ಪುಗಳನ್ನು ಕ್ಷಮಿಸಿದ್ದೇವೆ.. ಉತ್ತಮ ಆಡಳಿತಕ್ಕಾಗಿ ನಮ್ಮೊಂದಿಗೆ ಕೈ ಜೋಡಿಸಿ ಎಂದು ಹಂಗಾಮಿ ಸಿಎಂ ಪನ್ನೀರ್ ಸೆಲ್ವಂ ಶಶಿಕಲಾ ಬಣದ ಶಾಸಕರಿಗೆ ಬಹಿರಂಗ ಆಹ್ವಾನ ನೀಡಿದ್ದಾರೆ.

ಎಐಎಡಿಎಂಕೆ ಪಕ್ಷದಿಂದ ಹಂಗಾಮಿ ಸಿಎಂ ಪನ್ನೀರ್ ಸೆಲ್ವಂ ಹಾಗೂ ಅವರ ಬೆಂಬಲಿಗ ಸಂಸದ ಮತ್ತು ಶಾಸಕರನ್ನು ಉಚ್ಛಾಟನೆ ಮಾಡಿದ ಬೆನ್ನಲ್ಲೇ ಚೆನ್ನೈನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪನ್ನೀರ್ ಸೆಲ್ವಂ ಅವರು, ನಿಮ್ಮ ಎಲ್ಲ ತಪ್ಪುಗಳನ್ನು ಕ್ಷಮಿಸಿದ್ದೇವೆ. ತಮಿಳುನಾಡಿನ ಜನತೆಗೆ ಉತ್ತಮ ಆಡಳಿತ ನೀಡುವ ಸಲುವಾಗಿ ನಮ್ಮೊಂದಿಗೆ ಕೈ ಜೋಡಿಸಿ ಎಂದು  ಬಹಿರಂಗ ಆಹ್ವಾನ ನೀಡಿದ್ದಾರೆ.

"ಅಮ್ಮನ ಆತ್ಮ ನಮ್ಮನ್ನು ಮತ್ತು ರಾಜ್ಯವನ್ನು ಕಾಪಾಡುತ್ತದೆ. ಮತ್ತೆ ತಮಿಳುನಾಡಲ್ಲಿ ಅಮ್ಮನ ಸುವರ್ಣಯುಗ ಮುಂದುವರಿಯುತ್ತದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿರುತ್ತದೆ. ಶಾಂತಿ ಸುವ್ಯವಸ್ಥೆ ಕಾಪಾಡುತ್ತೇನೆ ಎಂದು ಅವರು ಹೇಳಿದ್ದಾರೆ. ಅಲ್ಲದೆ ಅಮ್ಮನ ಜನಪ್ರಿಯ ಆಡಳಿತದ ಯೋಜನೆಗಳು ಮುಂದುವರಿಯುತ್ತವೆ. ತಮಗೆ ಎಲ್ಲಾ ಶಾಸಕರು ಬೆಂಬಲ ನೀಡುತ್ತಾರೆ ಎಂದು ಹೇಳಿದ ಸೆಲ್ವಂ, ನನಗೆ ಬಹುಮತ ದೊರಕುವುದು ಖಚಿತ ಎಂದು ಭರವಸೆ ವ್ಯಕ್ತ ಪಡಿಸಿದ್ದಾರೆ.

ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತ ಪಡಿಸಿದ್ದಕ್ಕೆ ಧನ್ಯವಾದ ಹೇಳಿದ ಸೆಲ್ವಂ, ಈಗ ಎಐಡಿಎಂಕೆ ಒಟ್ಟಾಗುವ ಸಮಯ ಬಂದಿದೆ, ಎಲ್ಲರೂ ಒಗ್ಗಟ್ಟಾದರೇ ಮಾತ್ರ ಸಮಸ್ಯೆ ಬಗೆಹರಿಸಲು ಸಾದ್ಯ ಎಂದು ಹೇಳಿದ್ದಾರೆ, ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಅವರು ಜನತೆಯಲ್ಲಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT