ಸಂಗ್ರಹ ಚಿತ್ರ 
ದೇಶ

ವಿಧಾನಸಭಾ ಚುನಾವಣೆ 2017: ಉತ್ತರಪ್ರದೇಶ ಶೇ.41, ಉತ್ತರಾಖಂಡ್'ನಲ್ಲಿ ಶೇ.40 ರಷ್ಟು ಮತದಾನ

ಪಂಚರಾಜ್ಯ ವಿಧಾನಸಭಾ ಚುನಾವಣೆ ಪೈಕಿ ಉತ್ತರಪ್ರದೇಶದಲ್ಲಿ 2ನೇ ಹಂತದ ಹಾಗೂ ಉತ್ತರಾಖಂಡ್'ನಲ್ಲಿ ಮೊದಲನೇ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಈ ವರೆಗೂ ಉತ್ತರಪ್ರದೇಶದಲ್ಲಿ ಶೇ.41 ಹಾಗೂ ಉತ್ತರಾಖಂಡ್ ನಲ್ಲಿ ಶೇ.40 ರಷ್ಟು ಮತದಾನವಾಗಿದೆ...

ನವದೆಹಲಿ: ಪಂಚರಾಜ್ಯ ವಿಧಾನಸಭಾ ಚುನಾವಣೆ ಪೈಕಿ ಉತ್ತರಪ್ರದೇಶದಲ್ಲಿ 2ನೇ ಹಂತದ ಹಾಗೂ ಉತ್ತರಾಖಂಡ್'ನಲ್ಲಿ ಮೊದಲನೇ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಈ ವರೆಗೂ ಉತ್ತರಪ್ರದೇಶದಲ್ಲಿ ಶೇ.41 ಹಾಗೂ ಉತ್ತರಾಖಂಡ್ ನಲ್ಲಿ ಶೇ.40 ರಷ್ಟು ಮತದಾನವಾಗಿದೆ ಎಂದು ಬುಧವಾರ ತಿಳಿದುಬಂದಿದೆ.

ಉತ್ತರಾಖಂಡ್ ಮೊದನೇ ಹಂತದ ಮತದಾನ ನಡೆಯುತ್ತಿದ್ದು  69 ಕ್ಷೇತ್ರಗಳಲ್ಲಿ 628 ಮಂದಿ ಅಭ್ಯರ್ಥಿಗಳು ಕಣಗಿಳಿದಿದ್ದಾರೆ. 75.13,547 ಮಂದಿ ಮತದಾರರು ಮತದಾನ ಮಾಡಲಿದ್ದಾರೆ. ಚುನಾವಣೆ ಹಿನ್ನಲೆಯಲ್ಲಿ ಈಗಾಗಲೇ ರಾಜ್ಯದಾದ್ಯಂತ ಹೆಚ್ಚಿನ ಭದ್ರತೆಯನ್ನು ನೀಡಲಾಗಿದ್ದು, ಶಾಂತಿಯುತ ಮತದಾನಕ್ಕಾಗಿ 10,685 ಮತಗಟ್ಟೆಗಳನ್ನು ಸ್ಥಾನೆ ಮಾಡಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ಹಣಾಹಣಿ ನಡೆಯಲಿದೆ.

ಉತ್ತರಪ್ರದೇಶದಲ್ಲಿ ಒಟ್ಟು 7 ಹಂತದಲ್ಲಿ ಮತದಾನ ಪ್ರಕ್ರಿಯೆಗಳು ನಡೆಯಲಿದ್ದು. ಈಗಾಗಲೇ ಮೊದಲನೇ ಹಂತದ ಮತದಾನ ಮುಕ್ತಾಯಗೊಂಡಿದೆ. ಇಂದು ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಪಶ್ಚಿಮ ಉತ್ತರಪ್ರದೇಶದಲ್ಲಿ 67 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, 720 ಅಭ್ಯರ್ಥಿಗಳು ಕಣಕ್ಕಿಳಿಸಿದ್ದಾರೆ. 2.28 ಕೋಟಿ ಜನ ಮತದಾನ ಮಾಡಲಿದ್ದಾರೆ.

ಉಭಯ ರಾಜ್ಯಗಳಲ್ಲಿ ಇಂದು ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆಗಳು ಆರಂಭವಾಗಿದ್ದು, ಸಂಜೆ 5 ಗಂಟೆಗೆ ಮತದಾನ ಮುಕ್ತಾಯಗೊಳ್ಳಲಿದೆ. ಬಹುಜನ ಸಮಾಜ ಪಕ್ಷದ ಅಭ್ಯರ್ಥಿ ಕುಲ್ದೀಪ್ ಸಿಂಗ್ ಕನ್ವಾಸಿಯವರು ರಸ್ತೆ ಅಪಘಾತದಲ್ಲಿ ನಿಧನ ಹೊಂದಿರುವ ಹಿನ್ನಲೆಯಲ್ಲಿ ಉತ್ತರಾಖಂಡದಲ್ಲಿ ಕರ್ಣಪ್ರಯಾಗ್ ನಲ್ಲಿ ನಡೆಯಬೇಕಿದ್ದ ಚುನಾವಣೆಯನ್ನು ಸ್ಥಗಿತಗೊಳಿಸಲಾಗಿದ್ದು, ಮಾರ್ಚ್ 9ಕ್ಕೆ ಮತದಾನ ಪ್ರಕ್ರಿಯೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ

ಸ್ಮಿತ್ ಮಚ್ಚರ್ ಬಗ್ಗೆ ಮೌನವೇಕೆ: ನನ್ನ ಆದರ್ಶ ಧ್ರುವ ರಾಠಿ ಅಲ್ಲ: ಶಿವಸೇನೆ UBT ತೊರೆದ ರಾಷ್ಟ್ರೀಯ ವಕ್ತಾರ ಆನಂದ್ ದುಬೆ!

ಮಧ್ಯಪ್ರದೇಶ: ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾ ಮರಿ ಸಾವು!

'ದೇಶಕ್ಕೆ ಬೇಕಿರುವುದು ಸಾಕ್ಷ್ಯವೇ ಹೊರತು ಆರೋಪಗಳಲ್ಲ; ರಾಹುಲ್ ಗಾಂಧಿಯದ್ದು 'ಪೊಳ್ಳು' ಪ್ರತಿಭಟನೆ, ಆರೋಪ: ಬಿಜೆಪಿ ವಾಗ್ದಾಳಿ

ಗುಟ್ಟಾಗಿ ಮದುವೆಯಾಗಿದ್ದಾರಾ ನಟಿ ತ್ರಿಶಾ?: ಲಂಡನ್ ಸೆಲ್ಫಿಯಲ್ಲಿನ ಲಾಕೆಟ್ ನ ಗುಟ್ಟೇನು!