ಸಂಗ್ರಹ ಚಿತ್ರ 
ದೇಶ

ಪ್ರತ್ಯೇಕತಾವಾದಿಗಳ ಪ್ರತಿಭಟನೆ: ಕಾಶ್ಮೀರದಲ್ಲಿ ಹೆಚ್ಚಿದ ಭದ್ರತೆ

ಪ್ರತ್ಯೇಕತಾವಾದಿಗಳ ಪ್ರತಿಭಟನೆ ಹಿನ್ನಲೆಯಲ್ಲಿ ಕಾಶ್ಮೀರದಾದ್ಯಂತ ಭಾರೀ ಭದ್ರತೆಯನ್ನು ಒದಗಿಸಲಾಗಿದೆ ಎಂದು ಬುಧವಾರ ತಿಳಿದುಬಂದಿದೆ...

ಶ್ರೀನಗರ: ಪ್ರತ್ಯೇಕತಾವಾದಿಗಳ ಪ್ರತಿಭಟನೆ ಹಿನ್ನಲೆಯಲ್ಲಿ ಕಾಶ್ಮೀರದಾದ್ಯಂತ ಭಾರೀ ಭದ್ರತೆಯನ್ನು ಒದಗಿಸಲಾಗಿದೆ ಎಂದು ಬುಧವಾರ ತಿಳಿದುಬಂದಿದೆ.

ಸೋಮವಾರ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದಿದ್ದ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರು ಹಾಗೂ ಇಬ್ಬರು ನಾಗರೀಕರು ಸಾವನ್ನಪ್ಪಿದ್ದರು. ಅಲ್ಲದೆ, ಇಬ್ಬರು ಯೋಧರು ಹುತಾತ್ಮರಾಗಿದ್ದರು. ಈ ಹಿನ್ನಲೆಯಲ್ಲಿ ಪ್ರತ್ಯೇಕತಾವಾದಿಗಳು ಇಂದು ಪ್ರತಿಭಟನೆಗೆ ಕರೆ ನೀಡಿದ್ದರು.

ಈ ಹಿನ್ನಲೆಯಲ್ಲಿ ಪ್ರತ್ಯೇಕತಾವಾದಿಗಳ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಕಾಶ್ಮೀರದಾದ್ಯಂತ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ. ಮೂಲಗಳು ತಿಳಿಸಿರುವ ಪ್ರಕಾರ ಕಾಶ್ಮೀರದಲ್ಲಿ ಈ ವರೆಗೂ ಯಾವುದೇ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿಲ್ಲ ಎಂದು ತಿಳಿದುಬಂದಿದೆ.
 
ಕಾಶ್ಮೀರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈಗಾಗಲೇ ಹಲವೆಡೆ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

2016ರಲ್ಲಿ ಪ್ರತ್ಯೇಕತಾವಾದಿಗಳು ಸೃಷ್ಟಿಸಿದ್ದ ಹಿಂಸಾಚಾರ ವಾತಾವರಣವನ್ನು ಮತ್ತೆ ಮರುಕಳಿಸಲು ಬಿಡುವುದಿಲ್ಲ. ಪ್ರತಿಭಟೆ ಹತ್ತಿಕ್ಕಲು ಈಗಾಗಲೇ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮುಖ್ಯಸ್ಥ ಎಸ್. ಪಿ. ವೈದ್ ಅವರು ಹೇಳಿದ್ದಾರೆ.

ಪ್ರತಿಭಟನೆಗೆ ಕರೆ ನೀಡಿದ್ದರೂ ಕಾಶ್ಮೀರದಲ್ಲಿ ಸಾರ್ವಜನಿಕ ಮತ್ತು ಖಾಸಗಿ ಸಾರಿಗೆ ವಾಹನಗಳು, ಅಂಗಡಿ ಮುಗ್ಗಟ್ಟುಗಳು ಹಾಗೂ ವ್ಯವಹಾರಿಕ ಚಟುವಟಿಕೆಗಳು ಎಂದಿನಂತೆ ಸಾಮಾನ್ಯವಾಗಿಯೇ ಕಾರ್ಯನಿರ್ವಹಿಸುತ್ತಿವೆ. ಆದರೆ, ದಕ್ಶಿಣಾ ಕಾಶ್ಮೀರದ ಜಿಲ್ಲೆಗಳಾದ ಕುಲ್ಗಾಮ್, ಅನಂತ'ನಾಗ್ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ ಈಗಲೂ ಆತಂಕದ ವಾತಾವರಣ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್