ದೇಶ

ಇಸ್ರೋ ವಿಜ್ಞಾನಿಗಳಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಭಿನಂದನೆ

Sumana Upadhyaya
ನವದೆಹಲಿ: ಒಂದು ರಾಕೆಟ್ ಮೂಲಕ 104 ಸ್ಯಾಟಲೈಟ್ ಗಳನ್ನು ಉಡಾಯಿಸಿ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದ ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆ ಇಸ್ರೋ ವಿಜ್ಞಾನಿಗಳ ಸಾಹಸಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಭಿನಂದನೆ ತಿಳಿಸಿದ್ದಾರೆ.
ಅಂತರಿಕ್ಷ ಮತ್ತು ವೈಜ್ಞಾನಿಕ ಸಾಧನೆಗಳ ಮೂಲಕ ಭಾರತ ಜಗತ್ತಿಗೆ ತನ್ನ ಶಕ್ತಿ, ಸಾಮರ್ಥ್ಯವನ್ನು ತೋರಿಸಿದೆ. ಇದೀಗ ಇಡೀ ದೇಶವೇ ಹೆಮ್ಮೆ ಪಡುವಂಥ ಸಾಧನೆಯನ್ನು ಇಸ್ರೋ ವಿಜ್ಞಾನಿಗಳು ಮಾಡಿದ್ದಾರೆ ಎಂದು ಹೇಳಿದ್ದಾರೆ.
ದೇಶದಲ್ಲಿ ಶ್ರಮಪಟ್ಟು ಕೆಲಸ ಮಾಡುವ ವಿಜ್ಞಾನಿಗಳ ಸುಪ್ರಸಿದ್ಧ ಸಾಧನೆ ಇದಾಗಿದೆ ಎಂದು ಕೊಂಡಾಡಿದ್ದಾರೆ.
ಭಾರತೀಯ ಅಂತರಿಕ್ಷ ಕೇಂದ್ರ ಇಸ್ರೋ ಒಂದೇ ರಾಕೆಟ್ ಮೂಲಕ 104 ಉಪಗ್ರಹಗಳನ್ನು ಹಾರಿಸುವ ಮೂಲಕ ಇತಿಹಾಸ ಬರೆದಿದೆ. 
ಇಸ್ರೋದ ಯಶಸ್ವೀ ಉಡಾವಣಾ ವಾಹಕಗಳಲ್ಲಿ ಒಂದಾದ ಪಿಎಸ್‌ಎಲ್‌ವಿ ಸಿ 37 ವಾಹಕದ ಮೂಲಕ ಕಾರ್ಟೋಸ್ಯಾಟ್-2 ಸೇರಿದಂತೆ ಇತರೆ 103 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಆಂಧ್ರ ಪ್ರದೇಶದ  ಶ್ರೀಹರಿ ಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಬೆಳಗ್ಗೆ ಸುಮಾರು 9.28ರ ವೇಳೆಗೆ ಉಡಾವಣೆ ಮಾಡಲಾಯಿತು.
ಕಾರ್ಟೋಸ್ಯಾಟ್ -2 ಭೂವೀಕ್ಷಣಾ ಕಾರ್ಯ ನಡೆಸುವ ಉಪಗ್ರಹವಾಗಿದ್ದು, ಇದರೊಂದಿಗೆ  ಅಮೆರಿಕ, ಜರ್ಮನಿ, ಇಸ್ರೋಲ್‌, ಯುಎಇ, ನೆದರ್‌ಲ್ಯಾಂಡ್, ಬೆಲ್ಜಿಯಂ ಸೇರಿದಂತೆ ವಿದೇಶದ 101 ವಾಣಿಜ್ಯ ಉದ್ದೇಶಿತ ಉಪಗ್ರಹಗಳನ್ನು ಉಡಾವಣೆ ಮಾಡಲಾಗಿದೆ.
SCROLL FOR NEXT